ಪಾಕ ಅಕ್ರಮಿತ  ಕಾಶ್ಮೀರ ಮತ್ತು ಪಾಕಿಸ್ತಾನದ 9ಉಗ್ರರ ನೆಲೆಗಳ ಮೇಲೆ ದಾಳಿ ಬಗ್ಗೆ ಮಾಹಿತಿ ನೀಡಿ ಭಾರತೀಯ ಸೇನಾಧಿಕಾರಿಗಳ ಪತ್ರಿಕಾಗೋಷ್ಠಿ

4

“ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.

ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು ಮಹಿಳಾ ಅಧಿಕಾರಿಗಳು ಕಾರ್ಯಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು.

ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು ಎಂದರು

ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಲಾಯಿತು. ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಲಾಯಿತು. ಖಚಿತ ಮಾಹಿತಿಯ ನಂತರ ಗುರಿಗಳನ್ನು ನಿರ್ಧರಿಸಲಾಯಿತು ಎಂದರು.

ನಂತರ ಕರ್ನಲ್ ಸೋಫಿಯಾ ಅವರು 2008 ರ ಮುಂಬೈ ದಾಳಿಕೋರರಾದ ಅಜ್ಮಲ್ ಕಸಬ್ ಮತ್ತು ಡೇವಿಡ್ ಹೆಡ್ಲಿಗೆ ತರಬೇತಿ ನೀಡಲಾಗಿದ್ದ ಮುರಿಡ್ಕೆ ಸೇರಿದಂತೆ ನಾಶವಾದ ಭಯೋತ್ಪಾದಕ ಶಿಬಿರಗಳ ವೀಡಿಯೊಗಳನ್ನು ಪ್ರಸ್ತುತಪಡಿಸಿದರು.

ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಭಯೋತ್ಪಾದಕ ತಾಣ ಮಾರ್ಕಾಜ್ ಸುಭಾನ್ ಅಲ್ಲಾಹ್, ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯನ್ನು ಭಾರತೀಯ ಸಶಸ್ತ್ರ ಪಡೆಗಳು ಗುರಿಯಾಗಿಸಿಕೊಂಡಿವೆ.

ಯಾವುದೇ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ. ಇಲ್ಲಿಯವರೆಗೆ ಪಾಕಿಸ್ತಾನದಲ್ಲಿ ನಾಗರಿಕರ ಸಾವುನೋವುಗಳ ವರದಿಗಳಿಲ್ಲ ಎಂದರು

ಪಾಕಿಸ್ತಾನದೊಳಗೆ 12-18 ಕಿ.ಮೀ ದೂರದಲ್ಲಿರುವ ಸಿಯಾಲ್‌ಕೋಟ್‌ನ ಮೆಹಮೂನಾ ಜೋಯಾ ಶಿಬಿರ ಸೇರಿದಂತೆ ನಾಶವಾದ ಭಯೋತ್ಪಾದಕ ಶಿಬಿರಗಳನ್ನು ತೋರಿಸುವ ವೀಡಿಯೊಗಳನ್ನು ಪ್ರಸ್ತುತಪಡಿಸಿ, ಇದು ಹಿಜ್ಬುಲ್ ಮುಜಾಹಿದ್ದೀನ್‌ನ ಅತಿದೊಡ್ಡ ಶಿಬಿರಗಳಲ್ಲಿ ಒಂದಾಗಿದೆ

. ಇದು ಕಥುವಾ, ಜಮ್ಮು ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಹರಡುವ ನಿಯಂತ್ರಣ ಕೇಂದ್ರಗಳಲ್ಲಿ ಒಂದಾಗಿದೆ. ಪಠಾಣ್‌ಕೋಟ್ ವಾಯುಪಡೆಯ ನೆಲೆ ಶಿಬಿರದ ಮೇಲಿನ ದಾಳಿಯನ್ನು ಈ ಶಿಬಿರ ಯೋಜಿಸಿ ನಿರ್ದೇಶಿಸಿದೆ ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯೆಮೆನ್ ಗಲ್ಲು ಶಿಕ್ಷೆ ರದ್ದಾಗಿಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ...

ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್?: ಡ್ರೋನ್ ದಾಳಿಯಲ್ಲಿ ಉಲ್ಫಾ-ಐ ಕಮಾಂಡರ್ ನಯನ್ ಮೇಧಿ ಸೇರಿ 19 ಮಂದಿ ಸಾವು

ಮ್ಯಾನ್ಮಾರ್‌ನ ನಿಷೇಧಿತ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ULFA) ತನ್ನ ಪೂರ್ವ ಪ್ರಧಾನ ಕಚೇರಿಯ...

ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಪವಿತ್ರ ಸಿಂಗ್ ಬಟಾಲ ಬಂಧನ

“ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಪರ್ಕ ಹೊಂದಿರುವ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಸಂಘಟನೆಯೊಂದಿಗೆ ಸಂಬಂಧ...

ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್...