ಭಾರತದ ವಿವಿಧ ನಗರಗಳನ್ನು ಗುರಿಯಾಗಿರಿಸಿದ ಪಾಕಿಸ್ತಾನದ 32ಡ್ರೋನ್ ಗಳನ್ನು ಹೊಡೆದಿರುಳಿಸಿದ ಭಾರತೀಯ ಸೇನೆ

3

ಜಮ್ಮು: ಹಗಲು ಹೊತ್ತಿನಲ್ಲಿ ಸಂಚು ರೂಪಿಸಿ, ರಾತ್ರಿ ವೇಳೆಯಲ್ಲಿ ದಾಳಿ ನಡೆಸುವ ‘ರಣಹೇಡಿ ಪಾಕಿಸ್ತಾನ’ ಮತ್ತೆ ಜಮ್ಮು ಸೇರಿದಂತೆ ವಿವಿಧೆಡೆ ದಾಳಿ ಆರಂಭಿಸಿದೆ. ಜಮ್ಮುವಿನಲ್ಲಿ ಬ್ಲಾಕ್ ಔಟ್ ನಡುವೆ ಪಾಕಿಸ್ತಾನದ 32  ಡ್ರೋನ್ ಭಾರತೀಯ ಸೇನಾ ಪಡೆಗಳು ಹೊಡೆದುರುಳಿಸಿರುವುದಾಗಿ ವರದಿಯಾಗಿದೆ.


ಸಾಂಬಾ, ಪಠಾಣ್ ಕೋಟ್ ಮತ್ತು ಜಮ್ಮುವಿನಲ್ಲಿ ಡ್ರೋನ್ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಉರಿಯಲ್ಲಿ ಭಾರಿ ಶೆಲ್ ದಾಳಿಯಾಗಿರುವುದಾಗಿ ತಿಳಿದುಬಂದಿದೆ. ಗುರುವಾರ ಉರಿಯ ಮೊಹುರಾ ಬಳಿ ಪಾಕಿಸ್ತಾನದ ಶೆಲ್ ವೊಂದು ವಾಹನಕ್ಕೆ ಡಿಕ್ಕಿ ಹೊಡೆದು ನರ್ಗೀಸ್ ಬೇಗಂ ಎಂಬ ಮಹಿಳೆ ಸಾವನ್ನಪ್ಪಿದ್ದರು.

ಫಿರೋಜ್ ಪುರದಲ್ಲಿ ಒಬ್ಬರಿಗೆ ಗಾಯ: ಪಂಜಾಬಿನ ಫಿರೋಜ್ ಪುರದಲ್ಲಿ ಮನೆಯೊಂದರ ಮೇಲೆ ಪಾಕಿಸ್ತಾನದ ಡ್ರೋನ್ ಒಂದು ಅಪ್ಪಳಿಸಿದ್ದು, ಕುಟುಂಬದ ಸದಸ್ಯರೊಬ್ಬರು ಗಾಯಗೊಂಡಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ

. ಪಾಕಿಸ್ತಾನದಿಂದ ಮತ್ತೆ ಡ್ರೋನ್ ದಾಳಿಯಾಗುತ್ತಿದ್ದಂತೆಯೇ ಜಮ್ಮುವಿನಲ್ಲಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದು, ಸ್ಪೋಟದ ಶಬ್ಧಗಳು, ಬಹುಶಃ ಭಾರೀ ಫಿರಂಗಿಗಳ ಸದ್ದು ಈಗ ನಾನಿರುವ ಸ್ಥಳದಿಂದ ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ.

ಜಮ್ಮು ಮತ್ತು ಅದರ ಸುತ್ತಮುತ್ತಲಿನ ಪ್ರತಿಯೊಬ್ಬರು ಮುಂದಿನ ಕೆಲವು ಗಂಟೆಗಳ ಕಾಲ ದಯವಿಟ್ಟುಮನೆಯಲ್ಲಿರಿ ಅಥವಾ ನಿಮಗೆ ಆರಾಮದಾಯಕ ಸ್ಥಳದಲ್ಲಿಯೇ ಇರಿ. ವದಂತಿಗಳನ್ನು ನಿರಾಕರಿಸಿ, ಆಧಾರರಹಿತ ಅಥವಾ ದೃಢೀಕರಿಸದ ಸುದ್ದಿಗಳನ್ನು ಹಬ್ಬಿಸಬೇಡಿ.

ನಾವು ಇದನ್ನು ಒಟ್ಟಿಗೆ ಹೆದರಿಸೋಣ ಎಂದು ಮನವಿ ಮಾಡಿದ್ದಾರೆ. ಪಾಕಿಸ್ತಾನ ಸೇನೆಯ ವಿಫಲ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದ ಗುರುವಾರ ರಾತ್ರಿ ಬೆದರಿದ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆ ಶಾಂತ ಪರಿಸ್ಥಿತಿಯಿತ್ತು.

ಆದರೆ ರಾತ್ರಿಯಾಗುತ್ತಿದ್ದಂತೆಯೇ ಪಾಕಿಸ್ತಾನ ಸೇನೆ ಮತ್ತೆ ಡ್ರೋನ್ ಮತ್ತು ಶೆಲ್ ದಾಳಿಯನ್ನು ಆರಂಭಿಸಿವೆ. ಗುರುವಾರ ರಾತ್ರಿ ಪಾಕ್ ಸೇನೆಯು ಎಲ್‌ಒಸಿ ಉದ್ದಕ್ಕೂ ಭಾರೀ ಕ್ಯಾಲಿಬರ್ ಶಸ್ತ್ರಾಸ್ತ್ರಗಳೊಂದಿಗೆ ಶೆಲ್ ದಾಳಿ ನಡೆಸಿತು.

ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಅಂತರರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ 36 ಸ್ಥಳಗಳಲ್ಲಿ 300-400 ಡ್ರೋನ್‌ಗಳನ್ನು ಬಳಸಿಕೊಂಡು ದಾಳಿಗೆ ಮುಂದಾಗಿತ್ತು. ಅವುಗಳನ್ನು ಹೊಡೆದುರುಳಿಸಿದ್ದೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...