ಆಪರೇಷನ್ ಸಿಂಧೂರ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯಿಂದ ದೇಶವನ್ನು ಉದ್ದೇಶಿಸಿ ಭಾಷಣ

67

” ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನೊಳಗೊಂಡ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಎನ್ಎಸ್ಎ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು.


ಪಾಕಿಸ್ತಾನ ಏನಾದರೂ ಮಾಡಿದರೆ ಭಾರತದ ಪ್ರತಿಕ್ರಿಯೆ ಹೆಚ್ಚು ವಿನಾಶಕಾರಿ ಮತ್ತು ಬಲವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ

. ನಿನ್ನೆ ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ “ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ.

ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು ಈ ಷರತ್ತಿಗೆ ಒಪ್ಪಿದರೆ ಮಾತ್ರ ಮಾತುಕತೆಗೆ ಸಿದ್ಧರಿದ್ದೇವೆ, ಅದರ ಹೊರತಾಗಿ ಮಾತನಾಡಲು ಬೇರೇನೂ ಇಲ್ಲ.


ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಕಾಶ್ಮೀರದ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ” ಎಂದು ಕಡ್ಡಿ ಮುರಿದಂತೆ ಹೇಳಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...