ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ಶೌಚಾಲಯ ಗೋಡೆ ಮೇಲೆ ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ:: ರಚನ್ ಸಾಲಿಯಾನ್

8

ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾಹಾಸ್ಟಲ್ ಶೌಚಾಲಯ ದ ಗೋಡೆ ಮೇಲೆ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಸಿ ಆರೋಪಿತ ವಿದ್ಯಾರ್ಥಿನಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಸ್ಥಾಪಕಾಧ್ಯಕ್ಷ ಶಿವಕುಮಾರ್ ಕರ್ಜೆ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಕಾರ್ಕಳ :- ಮೇ :12 ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ಹಾಸ್ಟಲ್ ಕ್ಯಾಂಪಸ್ ಶೌಚಾಲಯ ಗೋಡೆಯಲ್ಲಿ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ನಡೆಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಗ್ರಹ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿ ಕೂಂಡಿರುವ ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ನ ಶೌಚಾಲಯ ಗೋಡೆಯ ಮೇಲೆ ದಿನಾಂಕ 07-05-2025 ರಂದು ರಾತ್ರಿ ಕೆಲವು ವಿದ್ಯಾರ್ಥಿನಿಯರು ದೇಶ ದ್ರೋಹ ಬರವಣಿಗೆಯ ಘಟನೆಯಲ್ಲಿ ಕಂಡು ಬಂದಿದ್ದು, ದೇಶದ ಅಂತರಿಕ ಭದ್ರತೆಗೆ ಅನುಮಾನ ಸೃಷ್ಟಿಸುವ ಕೃತ್ಯವಾಗಿದ್ದು , ಇದನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ತ್ರೀವವಾಗಿ ಖಂಡಿಸುತ್ತದೆ.

ಪ್ರಸುತ ಸಂದರ್ಭದಲ್ಲಿ ದೇಶದಲ್ಲಿ ನಡೆಯುತಿರುವ ಸೈನ್ಯ ಹಾಗೂ ಕೇಂದ್ರ ಸರಕಾರದ ರಾಜತಾಂತ್ರಿಕ ನಿರ್ಧಾರಗಳನ್ನು ದೇಶದ ಎಲ್ಲಾ ನಾಗರಿಕರು ಪಕ್ಷಾತೀತವಾಗಿ ಬೆಂಬಲಿಸುತ್ತಿರುವ ಸಂದರ್ಭದಲ್ಲಿ ಎಲ್ಲರಲ್ಲೂ ದೇಶಾಭಿಮಾನವನ್ನು ಹೆಚ್ಚಿಸುತಿದ್ದು, ನಮ್ಮ ದೇಶದ ಸೈನ್ಯದ ತ್ಯಾಗ ಮತ್ತು ಸೇವೆಯನ್ನು ಇಡೀ ದೇಶವೇ ಕೊಂಡಾಡುತಿರುವುದು ಗಮನಾರ್ಹ ಸಂಗತಿ. ಇಂತಹ ಸಂದರ್ಭದಲ್ಲಿ ಒಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಚಟುವಟಿಕೆ ಕಂಡು ಬಂದಿರುವುದು ಅವಮಾನಿಯ.

ಈ ರೀತಿಯ ದೇಶ ದ್ರೋಹದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ *ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅಂತಹ ವಿದ್ಯಾರ್ಥಿಗಳನ್ನು ಕಾಲೇಜ್ ನಿಂದ ಅಮಾನತು ಗೊಳಿಸಬೇಕೆಂದು

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಉಡುಪಿ ಜಿಲ್ಲಾಧ್ಯಕ್ಷ ಸ್ವಯಂ ಶೆಟ್ಟಿ , ಪಧಾಧಿಕಾರಿಗಳಾದ ಸ್ಮರಣ್ ನಿಟ್ಟೆ ,ಅಭಿಲಾಷ್ ನಿಟ್ಟೆ , ಕಾರ್ಕಳ ತಾಲೂಕು ಅಧ್ಯಕ್ಷ ಪ್ರತೀಕ್ ಶೆಟ್ಟಿ , ಸನ್ನಿ ನೇಲ್ಸನ್ ಡಿಸೋಜ ಉಪಸ್ಥಿತರಿದ್ದರು.*

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...