ಸರಕಾರದ ನೇತೃತ್ವದಲ್ಲಿ 108 ಆಂಬುಲೆನ್ಸ್ ಸೇವೆ ನಿರ್ವಹಣೆ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

3

“ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ ಇನ್ನು ಮುಂದೆ 108 ಆ್ಯಂಬುಲೆನ್ಸ್ ಸೇವೆ ಒದಗಿಸುತ್ತದೆ

. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವ ವಿಚಾರ ಏಜೆನ್ಸಿ ಮೂಲಕ ನಡೆಯುತ್ತದೆ.

ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದರು. ನಾವು ಯಾವುದೇ ವೇತನ ತಡೆ ಹಿಡಿದಿಲ್ಲ 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚಿತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದೆ

. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನೆಲೆ ತಡವಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡಿದಿಲ್ಲ ಎಂದರು.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್ಎನ್ಸಿಯು ಮತ್ತು ಐಸಿಯುದಲ್ಲಿ ಕಾರ್ಯನಿರ್ವಹಿಸುವ ಸ್ಟಾಫ್ ನರ್ಸ್ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಾನು ಯಾರಿಗೂ ಶಿಫಾರಸು ಮಾಡಿಲ್ಲ ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಆಯ್ಕೆ ವಿಚಾರವಾಗಿ, ನಾನು ಯಾರಿಗೂ ಶಿಫಾರಸು ಮಾಡಿಲ್ಲ. ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ ಮಾಡಿರುವುದು. ಇದು ಒಳ್ಳೆ ಬೆಳವಣಿಗೆ ಅಲ್ಲ. ಇದರ ಬಗ್ಗೆ ಮುಜರಾಯಿ ಇಲಾಖೆ ಸಚಿವರ ಜತೆ ಮಾತನಾಡುತ್ತೇನೆ.

ರೂಲ್ಸ್ ಪ್ರಕಾರ ಹರೀಶ ನನ್ನು ಬದಲಾವಣೆ ಮಾಡಲು ಆಗುವುದಿಲ್ಲ. 3 ವರ್ಷ ಅಧಿಕಾರಾವಧಿ ಇರುತ್ತದೆ ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು. ನಾಳೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಬಂದ ಮೇಲೆ ಹೊಸ ಕಾಯಕಲ್ಪ ಕೊಟ್ಟಿದೆ

. ಅಧಿವೇಶನದಲ್ಲಿ ಕೂಡ ಚರ್ಚೆ ಆಗಿ ಶಾಸಕರ ಸಮಿತಿ ವರದಿ ಕೊಟ್ಟು, ಸಾರ್ವಜನಿಕರ ಜೊತೆ ಚರ್ಚೆ ಆಗಿ ರಾಜ್ಯ ಲರು ಅನುಮೋದನೆ ಕೊಟ್ಟು ಮಾನ್ಯತೆ ಸಿಕ್ಕಿದೆ. ಬೆಂಗಳೂರು ವಿಶ್ವ ದರ್ಜೆ ನಗರ. ಆಡಳಿತ ವ್ಯವಸ್ಥೆ ಸುಧಾರಣೆ ಮಾಡುವ ಅವಶ್ಯಕತೆ ಇದೆ ಎಂದರು.


Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...