ಪಾಕಿಸ್ತಾನದಲ್ಲಿ ಬಂಧನದಲ್ಲಿದ್ದ ಬಿಎಸ್ಎಫ್ ಯೋಧನ ಬಿಡುಗಡೆ ಮರಳಿ ಭಾರತಕ್ಕೆ ಹಸ್ತಾಂತರ

64

“ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ.

ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ರ ಸುಮಾರಿಗೆ ಹಸ್ತಾಂತರಿಸಲಾಯಿತು ಎಂದು ಬಿಎಸ್ಎಫ್ ತಿಳಿಸಿದೆ.

ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಜವಾನ್ ಪಿಕೆ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ತಿಳಿಸಿದೆ

. ಅಧಿಕಾರಿಗಳ ಪ್ರಕಾರ, ಫಿರೋಜ್‌ಪುರ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ಎಲ್ಒಸಿಯ ಶೂನ್ಯ ರೇಖೆಯನ್ನು ದಾಟಿದ ನಂತರ ಏಪ್ರಿಲ್ 23 ರಂದು ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು.

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರು ಸಾವನ್ನಪ್ಪಿದ ವಿನಾಶಕಾರಿ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಅವರನ್ನು ವಶಕ್ಕೆ ಪಡೆಯಲಾಗಿತ್ತು

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...