ನ್ಯಾಯ ಕೇಳಲು ಬಂದ ಯುವಕನ ಮೇಲೆ ತಹಶೀಲ್ದಾರ್ ಕಚೇರಿಯಲ್ಲಿ ಹಲ್ಲೆ ವಿಡಿಯೋ ವೈರಲ್

87

“ನ್ಯಾಯ ಕೇಳಲು ಬಂದ ಯುವಕನಿಗೆ ಉಪ ತಹಶಿಲ್ದಾರ್ ಹಾಗೂ ಅವರ ಜೊತೆಗಿದ್ದವರು ಹಲ್ಲೆ ನಡೆಸಿದ ಘಟನೆ ಗದಗದ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

ಘಟನೆ ಕುರಿತು ತಪ್ಪಿತಸ್ಥರನ್ನು ಗುರುತಿಸಲು ಅಕ್ಷಯ್ ತಹಶಿಲ್ದಾರ್ ಕಚೇರಿಗೆ ಹೋಗಿದ್ದನು.

ಅಕ್ಷಯ್ ಪ್ರಶ್ನೆಗೆ ಕೆರಳಿದ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಹಾಗೂ ಅವರ ತಂಡ ಅಕ್ಷಯ್ ನನ್ನು ಕಚೇರಿಗೆ ಕರೆಸಿಕೊಂಡು ಹಲ್ಲೆ ನಡೆಸಿದರು ಎಂದು ಹೇಳಲಾಗುತ್ತಿದೆ.

ಘಟನೆ ಸುದ್ದಿಯಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೋರ್ವರು ರಾಜಿ ಸಂಧಾನ ಮಾಡಿದ್ದಾರೆ ಎನ್ನುವುದು ಕೂಡ ಸುದ್ದಿಯಾಗಿದೆ. ಘಟನೆ ಬಗ್ಗೆ ಸಂಪೂರ್ಣ ವಿವರ ತಿಳಿಯಬೇಕಿದೆ.

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...