ಬೆಂಗಳೂರಿನಲ್ಲಿ ಒಬ್ಬ ಆಧುನಿಕ ರಾಬಿನ್ ಹುಡ್ ಮನೆ ಕಳ್ಳತನ ಮಾಡಿ 20 ವಿದ್ಯಾರ್ಥಿಗಳ. 14 ಲಕ್ಷ ಶಾಲಾ ಕಾಲೇಜು ಶುಲ್ಕ ಕಟ್ಟಿದ್ದ ಆರೋಪಿ ಬಂಧನ

37

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ರಾಬಿನ್ ಹುಡ್ ಮಾದರಿಯ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ

. ಹೌದು.. ಕಳ್ಳತನ ಮಾಡಿದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು  ಬಂಧಿಸಿದ್ದಾರೆ

. ಬಂಧಿತರನ್ನು ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್, ಆತನ ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್‌ ಎಂದು ಗುರುತಿಸಲಾಗಿದೆ.

ಈ ಮೂವರ ಪೈಕಿ ಶಿವು ಅಲಿಯಾಸ್ ಶಿವರಪ್ಪನ್ ಈ ಗ್ಯಾಂಗ್ ನ ಮಾಸ್ಟರ್ ಮೈಂಡ್ ಆಗಿದ್ದು, ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ

. ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ ಜಗ್ಗ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡುತ್ತಿದ್ದ. ಹೀಗೆ ಮಾರಾಟ ಮಾಡಿದ ಹಣವನ್ನು ತಂದು ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟುತ್ತಿದ್ದ ಎನ್ನಲಾಗಿದೆ.

ಸ್ನೇಹಿತರಿಗೂ ನೆರವು ಪೊಲೀಸ್ ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಫೀಸ್ ಕಟ್ಟಿದ್ದಾನೆ.

ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಿವು, ಅನಿಲ್ ಹಾಗು ವಿವೇಕ್‌ನನ್ನು ಬಂಧಿಸಿದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...