ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ಸುಪ್ರೀಂ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

3

ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ IAS ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪೂಜಾ ಖೇಡ್ಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸತೀಶ ಚಂದ್ರ ಅವರಿದ್ದ ಪೀಠ, ತನಿಖೆಗೆ ಸಹಕರಿಸುವಂತೆ ಪೂಜಾ ಖೇಡ್ಕರ್‌ ಗೆ ಸೂಚಿಸಿದೆ.

ವಿಚಾರಣೆ ವೇಳೆ, ‘ಆಕೆ ಮಾಡಿದ ಘೋರ ಅಪರಾಧವೇನು? ಅವರು ಡ್ರಗ್ಸ್ ಮಾರಾಟಗಾರ್ತಿಯೇ? ಅಥವಾ ಭಯೋತ್ಪಾದಕಿಯೇ? ಆಕೆ ಏನಾದರೂ ಕೊಲೆ ಮಾಡಿದ್ದಾಳೆಯೇ? ಎನ್‌ಡಿಪಿಎಸ್‌ ಕಾಯ್ದೆಯಡಿ ಅವರ ಬಂಧನವಾಗಿಲ್ಲ, ನೀವು ತನಿಖೆ ಪೂರ್ಣಗೊಳಿಸಿ.

ಎಲ್ಲವನ್ನು ಕಳೆದುಕೊಂಡಿರುವ ಆಕೆಗೆ ಎಲ್ಲಿಯೂ ಕೆಲಸ ಸಿಗುತ್ತಿಲ್ಲ’ ಎಂದು ಪೀಠ ಹೇಳಿದೆ. “ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತವಾದ ಪ್ರಕರಣ ಇದು” ಎಂದು ಪೀಠ ಗಮನಿಸಿದೆ

ಇನ್ನು ಪೂಜಾ ಖೇಡ್ಕರ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ದೆಹಲಿ ಪೊಲೀಸರು ಮತ್ತು ಯುಪಿಎಸ್‌ಸಿ ವಿರೋಧ ವ್ಯಕ್ತಪಡಿಸಿವೆ. ಆಕೆ ಆಯೋಗ ಮತ್ತು ಜನರನ್ನು ವಂಚಿಸಿದ್ದಾಳೆ. ಆಕೆ ತನಿಖೆಯಲ್ಲಿ ಸಹಕರಿಸುತ್ತಿಲ್ಲ ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಸುಪ್ರೀಂ ಕೋರ್ಟ್ ಗೆ ತಕರಾರು ಸಲ್ಲಿಸಿವೆ.

ಏನಿದು ಪ್ರಕರಣ? 2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು.

ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿತ್ತು. ಆದರೆ ಪೂಜಾ ಖೇಡ್ಕರ್ ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆಯಾದರೂ, ದೆಹಲಿ ಪೊಲೀಸರು ಅವರ ವಿರುದ್ಧ ವಿವಿಧ ಅಪರಾಧಗಳಿಗಾಗಿ ಎಫ್‌ಐಆರ್ ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...