ಬೆಂಗಳೂರು ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದ ಪ್ರದೇಶಗಳಿಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಪರಿಸ್ಥಿತಿ ವೀಕ್ಷಣೆ ನಗರ ಪ್ರದಕ್ಷಣೆ

4

ಕೆಲವು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಜನತೆ ತತ್ತರಿಸಿ ಹೋಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ನಗರಪ್ರದಕ್ಷಿಣೆ ಮಾಡಿ ಅವಲೋಕಿಸಿದರು.

ಇಂದು ಬೆಳಗ್ಗೆಯಿಂದಲೇ ನಗರದ ಹಲವು ಮಳೆ ನೀರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ನಾಗರಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಬೆಂಗಳೂರಿನ ಶಾಸಕರು ಉಪಸ್ಥಿತರಿದ್ದರು.

ಬೆಂಗಳೂರಿನ ಯಲಹಂಕ, ಎಚ್ ಬಿ ಆರ್ ಲೇಔಟ್, ಮಾನ್ಯತಾ ಟೆಕ್ ಪಾರ್ಕ್, ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ, ಸಾಯಿ ಲೇಔಟ್ ಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಈ ವೇಳೆ ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

ಈ ವೇಳೆ ಅಧಿಕಾರಿಗಳ ವಿರುದ್ಧವೇ ಗರಂ ಆದ ಸಿಎಂ ಸಿದ್ದರಾಮಯ್ಯ, ‘ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಖಾರವಾಗಿ ಪ್ರಶ್ನಿಸಿದರು

. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಬಳಿಕ ಹೆಚ್ ಬಿಆರ್ ಲೇಔಟ್ ನ ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸಿಎಂ ಸೂಚನೆ ನೀಡಿದರು.

ಮಳೆ ಬಾದಿತ ಪ್ರದೇಶಗಳಲ್ಲಿ  ಬೇಸ್ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ಟೌನ್ ಪ್ಲಾನಿಂಗ್ ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು. ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ.

ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ ಓವರ್ ಫ್ಲೋ ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ. ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಿದರು.

ಅಹವಾಲು ಸ್ವೀಕರಿಸಿದ ಸಿಎಂ, ಮೂಲಭೂತ ಸೌಕರ್ಯ ಪ್ರಶ್ನಿಸಿದ ನಿವಾಸಿಗಳು ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ವೇಳೆ ಸ್ಥಳೀಯರು ಈ ಪ್ರದೇಶದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದರು

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...