ಬೆಂಗಳೂರು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತರ ಭೇಟಿ ಅಧಿಕಾರಿಗಳ ವಿರುದ್ಧ ಗರಂ ಸ್ವಯಂ ಪ್ರೇರಿತ ದೂರದ ದಾಖಸಿಕೊಂಡ ಲೋಕಾಯುಕ್ತರು

3

ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ, ನ್ಯಾ.ಬಿ.ವೀರಪ್ಪ ಅವರು ಗುರುವಾರ ಭೇಟಿ ನೀಡಿದ್ದು, ಅವ್ಯವಸ್ಥೆಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆದರು.

ಮಳೆಯಿಂದ ಹಾನಿಗೊಳಗಾದ ನಿವಾಸಿಗಳ ಸಂಕಷ್ಟಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಅಧಿಕಾರಿಗಳೊಂದಿಗೆ ಸಾರ್ವಜನಿಕ ಸಭೆಯನ್ನು ಕರೆದಿದ್ದು, ಆಸಕ್ತರು ಸಭೆಯಲ್ಲಿ ಭಾಗವಹಿಸಬಹುದಾಗಿದೆ.

ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ನಗರದ ಸಿಲ್ಡ್‌ಬೋರ್ಡ್, ಪಣತ್ತೂರು ರೈಲ್ವೆ ಸೇತುವೆ, ಸಾಯಿ ಲೇಔಟ್, ಮಾನ್ಯತಾ ಟೆಕ್ ಪಾರ್ಕ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ಸಿಲ್ಕ್ ಬೋರ್ಡ್ ವೃತ್ತದ ಬಳಿ ಮಳೆ ನೀರುಗಾಲುವೆಯಲ್ಲಿ ನೀರು ಹರಿಯದೆ ಸ್ಥಗಿತಗೊಂಡಿರುವುದನ್ನು ಕಂಡು ಸ್ಥಳದಲ್ಲಿದ್ದ ಬಿಎಂಆರ್‌ಸಿಎಲ್ ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಎರಡು ಸಂಸ್ಥೆಗಳ ಮುಖ್ಯ ಎಂಜಿನಿಯರ್‌ಗಳನ್ನು ವಿಚಾರಣೆ ನಡೆಸಿದರು

. ಈ ವೇಳೆ ಅವರು ನೀಡಿದ ವಿವರಣೆಯಿಂದಾಗಿ ಸಮಾಧಾನಗೊಳ್ಳದ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಶುಕ್ರವಾರ ಈ ಬಗ್ಗೆ ವಿಕೃತವಾದ ವರದಿಯೊಂದಿಗೆ ಹಾಜರಾಗಿ ವಿವರಣೆ ನೀಡುವಂತೆ ಸೂಚನೆ ನೀಡಿದರು

ಇದೇ ವೇಳೆ ಮಳೆ ನೀರು ನಿಲ್ಲದಂತೆ ಕೈಗೊಳ್ಳುವ ರಿಹಾರಗಳ ಕುರಿತು ಮಾಹಿತಿ ನೀಡುವಂತೆಯೂ ತಿಳಿಸಲಾಯಿತು.

ಬಳಿಕ ಪಣತ್ತೂರುಗೆ ತೆರಳಿದ ಲೋಕಾಯುಕ್ತರು, ಉಪ ಲೋಕಾಯುಕ್ತರು ಪಣತ್ತೂರು ಮುಖ್ಯರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯ ಬಳಿ ಜಲಾವೃತವನ್ನು ಕಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಹೆಣ್ಣೂರು ಬಳಿಯ ಸಾಯಿ ಬಡಾವಣೆಗೆ ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯ ನಿವಾಸಿಗಳು ತಮ್ಮ ಅಹವಾಲನ್ನು ಮುಂದಿಟ್ಟರು.

ಈ ವೇಳೆ ಮನೆಗಳಿಗೆ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿರುವುದು ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು. ಜನರು ಸಹ ತಮ್ಮ ಸಂಕಷ್ಟದ ಬಗ್ಗೆ ವಿವರಿಸಿದರು.

3 ದಿನಗಳಿಂದ ವಿದ್ಯುಚ್ಛಕ್ತಿ ಸಂಪರ್ಕ ಕಡಿತಗೊಳಿಸಲಾಗಿದ್ದು, ಪ್ರತಿ ಬಾರಿ ಮಳೆ ಬಂದರೆ ಈ ಸಮಸ್ಯೆ ತಲೆದೋರುತ್ತದೆ. ಇದಕ್ಕೆ ಶಾಶ್ವತ ಪರಿಹಾರವನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಜನರ ಸಮಸ್ಯೆಗಳನ್ನು ಆಲಿಸಿದ ಲೋಕಾಯುಕ್ತ, ಉಪ ಲೋಕಾಯುಕ್ತರು ಶುಕ್ರವಾರ ವಿಚಾರಣೆಗೆ ಹಾಜರಾಗಿ ವಿಸ್ತೃತ ವರದಿ ನೀಡಬೇಕು. ಸಾರ್ವಜನಿಕರು ಸಹ ಹಾಜರಾಗಿ ಅಹವಾಲು ಸಲ್ಲಿಸುವಂತೆ ತಿಳಿಸಿದರು

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...