ಗ್ಯಾಂಗ್‌ರೇಪ್‌ ಪ್ರಕರಣದ ಆರೋಪಿಗಳಿಂದ ರೋಡ್ ಶೋ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ

44

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಜೈಲಿನಿಂದಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ನಡೆದಿದೆ.

ಕಳೆದ 3 ದಿನಗಳ ಹಿಂದೆ ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೆ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರ ಜೊತೆ ಅಕ್ಕಿ ಆಲೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿರೋ ವೀಡಿಯೋಗಳು ವೈರಲ್ ಆಗಿದೆ.

ಕಳೆದ 3 ದಿನಗಳ ಹಿಂದೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಸಂತ್ರಸ್ತೆ ಆರೋಪಿಗಳನ್ನು ಗುರುತಿಸಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಎ1 ಆರೋಪಿ ಅಪ್ತಾಬ್ ಚಂದನಕಟ್ಟಿ, ಎ2 ಮದರ್ ಸಾಬ್ ಮಂಡಕ್ಕಿ, ಎ3 ಸಮಿವುಲ್ಲಾ ಲಾಲನವರ, ಎ4 ಮಹಮದ್ ಸಾದಿಕ್ ಅಗಸಿಮನಿ, ಎ8 ಶೊಯಿಬ್ ಮುಲ್ಲಾ, ಎ11 ತೌಸಿಪ್ ಚೋಟಿ, ಎ13 ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರು ಮಾಡಿದೆ.

2024, ಜನವರಿ 8ರಂದು ಹಾನಗಲ್ ಹೊರವಲಯದಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜೈಲುಪಾಲಾಗಿದ್ದ 19 ಆರೋಪಿಗಳ ಪೈಕಿ 12 ಆರೋಪಿಗಳು 10 ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು.

ಆದರೆ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಗಳನ್ನು ಹಲವು ಬಾರಿ ನ್ಯಾಯಾಲಯ ತಿರಸ್ಕರಿಸಿತ್ತು. ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ್ದ ಹೇಳಿಕೆಗಳನ್ನು ಉಳಿಸಿಕೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಈಗ ಜಾಮೀನು ಸಿಕ್ಕಿದೆ.

ಆರೋಪಿಗಳು ಜಾಮೀನು ಸಿಕ್ಕ ಬೆನ್ನಲ್ಲೇ ಕಾರಿನಲ್ಲಿ ರೋಡ್ ಶೋ ನಡೆಸಿರುವುದು ಜಿಲ್ಲೆಯ ಜನರ ಆಕ್ರೋಶ ಕಾರಣವಾಗಿದೆ. ಪೊಲೀಸ್ ಇಲಾಖೆ ಮತ್ತೆ ಪ್ರಕರಣ ದಾಖಲಿಸಿಕೊಂಡು ಜಾಮೀನು ರದ್ದು ಮಾಡುವಂತೆ ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...