ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆಯಲ್ಲಿ ಬಿಜೆಪಿ 18 ಶಾಸಕರ ಅಮಾನತು ವಾಪಾಸ್ ನಿರ್ಧಾರ

68
ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದ್ದಾರೆ.


18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಇಂದು ಸ್ಪೀಕರ್ ಯುಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.

ಇದೀಗ ಬಿಜೆಪಿ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ.

ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಸಂತೋಷದಿಂದ ಶಾಸಕರ ಅಮಾನತು ಹಿಂಪಡೆದಿದ್ದೇನೆ.

ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡೆ. ಕ್ರಮತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...