ವಿಪಕ್ಷಗಳ ಸದಸ್ಯರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಸಂವಿಧಾನವನ್ನು ಹತ್ತಿಕ್ಕುವ ಪ್ರಯತ್ನ ರಾಜ್ಯ ಸರಕಾರ ನಡೆಸುತ್ತಿದೆ ::ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

5

“ವಿವಿಧ ಪ್ರಕರಣಗಳಲ್ಲಿ ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಬಿಜೆಪಿ ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ವಿರೋಧ ಪಕ್ಷಗಳಿಗೆ ಬೆದರಿಕೆ ಹಾಕುತ್ತಿದೆ ಎಂದು ಹೇಳಿದರು

. ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಡೆದ ನಮ್ಮ ಪ್ರತಿಭಟನೆಯ ಸಂದರ್ಭದಲ್ಲಿ, ಬಿಜೆಪಿಯ ನಾಯಕರೊಬ್ಬರು ಜಿಲ್ಲಾಡಳಿತದ ವಿರುದ್ಧ ಮಾತನಾಡಿದ್ದರು.

ನಂತರ ಕ್ಷಮೆಯಾಚಿಸಿದ್ದರೂ. ಆದರೂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ ಮತ್ತು ಹರೀಶ್ ಪೂಂಜಾ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವವನ್ನು ಕೊಲ್ಲುವ ಪ್ರಯತ್ನ. ರಾಜ್ಯ ಸರ್ಕಾರದ ಒತ್ತಡದಿಂದಾಗಿ ಸ್ಪೀಕರ್ ಅವರನ್ನು ಅಮಾನತುಗೊಳಿಸಲಾಗಿದೆ. ಇದು ವಿರೋಧ ಪಕ್ಷಗಳ ಅಧಿಕಾರವನ್ನು ಕಡಿತಗೊಳಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದರು

. ರಾಜ್ಯ ಸರ್ಕಾರದ ಇತ್ತೀಚಿನ ಹಲವಾರು ನಿರ್ಧಾರಗಳನ್ನು “ತರ್ಕಹೀನ” ವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಇತ್ತೀಚಿನ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ಮಂಡ್ಯದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾಯಿ ಕಡಿತಕ್ಕೆ ಚಿಕಿತ್ಸೆಗಾಗಿ ಹೋಗುವಾಗ ಪೊಲೀಸರು ದ್ವಿಚಕ್ರ ವಾಹನ ತಡೆದು, ಕೀ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಮಗು ಜಾರಿಬಿದ್ದು ಸತ್ತಿದೆ.

ಈ ಘಟನೆಗೆ ಯಾರು ಹೊಣೆಗಾರರು? ಖಜಾನೆ ಬರಿದಾಗಿರುವುದರಿಂದ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಪರದಾಡುತ್ತಿದೆ. ಹೀಗಾಗಿ ಸಂಚಾರಿ ಪೊಲೀಸರಿಗೂ ದಂಡ ಸಂಗ್ರಹಕ್ಕೆ ಗುರಿ ನಿಗದಿ ಮಾಡಿದೆ ಎಂದು ಆರೋಪಿಸಿದರು.

ನೀತಿ ಆಯೋಗದ ಸಭೆಗೆ ಹಾಜರಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ವಿಜಯೇಂದ್ರ ಅವರು ತರಾಟೆಗೆ ತೆಗೆದುಕೊಂಡರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದ್ದಾರೆ. ಸಚಿವರಿಗೆ ಅನಿಸಿದಕ್ಕೆ ಸಂಪುಟದಲ್ಲಿ ಸಮ್ಮತಿ ಸಿಗುತ್ತದೆ. ನಾಳೆ ವಿಜಯಪುರ ಜಿಲ್ಲೆ, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಇನ್ನೇನೋ ಸಲಹೆ ಕೊಡುತ್ತಾರೋ ಗೊತ್ತಿಲ್ಲ.

ಒಟ್ಟಿನಲ್ಲಿ ಈ ಸರ್ಕಾರ ಸಚಿವರು, ಶಾಸಕರನ್ನು ಖುಷಿ ಪಡಿಸಲು ಜಿಲ್ಲೆಗಳ ಹೆಸರು ಬದಲಿಸಲು ಹೊರಟಿದೆ ಎಂದು ಟೀಕಿಸಿದರು. ಮೈಸೂರು ಸ್ಯಾಂಡಲ್‌ ಸೋಪ್‌ಗೆ ರಾಯಭಾರಿಯಾಗಿ ತಮನ್ನಾ ಅವರ ನೇಮಕದ ಕುರಿತು ಮಾತನಾಡಿ, ರಾಜ್ಯ ಸರ್ಕಾರ ಯಾರೋ ಪರಿಣಿತರು ಹೇಳಿದರೆಂದು ತಮನ್ನಾ ಅವರನ್ನು ನೇಮಕ ಮಾಡಿದೆ.

ಈ ತೀರ್ಮಾನದಲ್ಲಿ ರಾಜ್ಯದ ಹಿತಾಸಕ್ತಿ ಇದೆಯೋ? ರಾಜಕಾರಣಿಗಳ ಹಿತಾಸಕ್ತಿ ಇದೆಯೋ? ಇದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು

Leave a comment

Leave a Reply

Your email address will not be published. Required fields are marked *

Related Articles

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...

ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ...