ಒಂಬತ್ತು ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಗೆ ಲಗ್ಗೆ

43

“ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ.

ಬರೊಬ್ಬರಿ 9 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ತಂಡ ಫೈನಲ್ ಪ್ರವೇಶಿಸಿದ್ದು, ತಂಡದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

ಜೂನ್ 1 ರಂದು ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರೊಂದಿಗೆ ಆಡುವ ಮೂಲಕ ಪಂಜಾಬ್ ಕಿಂಗ್ಸ್ ಫೈನಲ್‌ಗೆ ಪ್ರವೇಶಿಸಲು ಮತ್ತೊಂದು ಅವಕಾಶವನ್ನು ಪಡೆಯುತ್ತದೆ

ಆರ್ ಸಿಬಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪರಿಣಾಮ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಕಿಂಗ್ಸ್ 14.1 ಓವರ್‌ಗಳಲ್ಲಿ ಕೇವಲ 101 ರನ್‌ಗಳಿಗೆ ಸರ್ವಪತನ ಕಂಡಿತು.

ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಕೇವಲ 10 ಓವರ್ ಗಳಿಗೆ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿ ಗೆಲುವನ್ನು ತನ್ನದಾಗಿಸಿಕೊಂಡಿತು

. ಮಾರ್ಕಸ್ ಸ್ಟೊಯಿನಿಸ್ 26 ರನ್‌ಗಳೊಂದಿಗೆ ತಂಡದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರಾರಾದರು.

ಆರ್‌ಸಿಬಿ ಪರ ಸುಯಶ್ ಶರ್ಮಾ (3/17) ವೇಗಿಗಳಾದ ಜೋಶ್ ಹ್ಯಾಜಲ್‌ವುಡ್ (3/21), ಯಶ್ ದಯಾಳ್ (2/26) ಮತ್ತು ಭುವನೇಶ್ವರ್ ಕುಮಾರ್ (1/17) ಅತ್ಯುತ್ತಮ ಬೌಲರ್ ಗಳೆನಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಐಸಿಸಿ ಎಚ್ಚರಿಕೆ ಬಾಲ ಮುದುರಿಕೊಂಡ ಪಾಕಿಸ್ತಾನ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಿಕ ಪಂದ್ಯದಲ್ಲೇ ಭಾರತ ತಂಡಕ್ಕೆ ಭರ್ಜರಿ ಜಯದೊಂದಿಗೆ  ಟೂರ್ನಿಯಲ್ಲಿ ಶುಭಾರಂಭ

“ಮುಂಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸುವ...

6ನೇ ಬಾರಿಗೆಅಂಡರ್ 19 ವರ್ಲ್ಡ್ ಕಪ್ ಗೆದ್ದ ಭಾರತೀಯ ಯುವ ತಂಡ

ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ...

ಸತತ ಎರಡನೇ ಬಾರಿ ಮಹಿಳಾ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

“ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ...