ಹಿಂದೂ ಮುಖಂಡ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ನೋಟಿಸ್ ಹಿಂದುತ್ವವನ್ನು ದಮನಿಸುವ ಷಡ್ಯಂತರ ವಿರುದ್ಧ ಕಾರ್ಯಕರ್ತರ ಆಕ್ರೋಶ

75

” ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಈ ಕಠಿಣ ಕ್ರಮದ ಭಾಗವಾಗಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ  ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್ನಲ್ಲಿ ಆದೇಶಿಸಲಾಗಿದೆ.

ಅರುಣ್ ಪುತ್ತಿಲ ಗಡಿಪಾರು ನೋಟಿಸ್ ವಿವರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ

ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ.

ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ

ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ.

ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ನಲ್ಲಿ ಉಲ್ಲೇಖಿಸಿಲ್ಲ

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...