6 ವರ್ಷದ ಬಾಲಕಿಯ ಮೇಲೆ ಮಸೀದಿ ಆವರಣದಲ್ಲಿ ಮೌಲ್ವಿಯ ತಂದೆಯಿಂದ ಅತ್ಯಾಚಾರ

47

“6 ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ

. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಮೌಲ್ವಿಯ ತಂದೆಯವಿರುದ್ಧ ಎಫ್‌ಐಆರ್ ದಾಖಲಿಸಿ ನಂತರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮೌಲ್ವಿಯ ತಂದೆಯಾಗಿರುವ ಆರೋಪಿಗೆ ಗೌರವದ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಉಳಿಯಲು ಕೊಠಡಿ ನೀಡಲಾಗಿದ್ದು,

ಇದನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಿಯು ಬಾಲಕಿಗೆ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ, ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶದ ಮೂಲದವನಾಗಿರುವ ಆರೋಪಿ, 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕೆ ಬಂದಿದ್ದು, ಅಂದಿನಿಂದ ಪಾದಚಾರಿ ಮಾರ್ಗದಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿ, ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಮಸೀದಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಜಮಾತ್ ವಿರುದ್ಧ ಕಿಡಿಕಾರಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...