ಐಪಿಎಲ್ ಟ್ರೋಫಿ 2025 ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ  ರಾಯಲ್ ಚಾಲೆಂಜರ್ಸ್ ಬೆಂಗಳೂರು

2

“ನಿರೀಕ್ಷೆಯಂತೆಯೇ ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಆರ್ ಸಿಬಿ ನೀಡಿದ 191 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಪಂಜಾಬ್ ಪರ ಪ್ರಿಯಾಂಶ್ ಆರ್ಯ 24 ರನ್ ಗಳಿಸಿದರೆ, ಪ್ರಭ್ ಸಿಮ್ರನ್ ಸಿಂಗ್ 26 ರನ್ ಗಳಿಸಿ ಔಟಾದರು. ನಾಯಕ ಶ್ರೇಯಸ್ ಅಯ್ಯರ್ ಕೇವಲ 1 ರನ್ ಗಳಿಸಿ ರೊಮಾರಿಯೋ ಶೆಫರ್ಡ್ ಗೆ ವಿಕೆಟ್ ಒಪ್ಪಿಸಿದರು.

ಆದರೆ ಈ ಹಂತದಲ್ಲಿ ಪಂಜಾಬ್ ಇನ್ನಿಂಗ್ಸ್ ಗೆ ಬಲ ನೀಡಿದ ಜಾಶ್ ಇಂಗ್ಲಿಸ್ 23 ಎಸೆತಗಳಲ್ಲಿ 39 ರನ್ ಗಳಿಸಿದರು. ಆದರೆ ಕೃನಾಲ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು

ಈ ಹಂತದಲ್ಲಿ ಪಂಜಾಬ್ ಇನ್ನಿಂಗ್ಸ್ ಜೀವ ತುಂಬಿದ್ದು ನೇಹಲ್ ವಧೇರಾ (15). ಆದರೆ ಅವರ ರನ್ ಗಳಿಕೆ ಕೂಡ 15ಕ್ಕೇ ಸೀಮಿತವಾಯಿತು. ಅಪಾಯಕಾರಿ ಪರಿಣಮಿಸಿದ್ದ ವಧೇರಾರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡಿದರು.

ಬಳಿಕ ಕ್ರೀಸ್ ಗೆ ಬಂದ ಮಾರ್ಕಸ್ ಸ್ಟಾಯ್ನಿಸ್ ಸಿಕ್ಸರ್ ಭಾರಿಸಿ 2ನೇ ಎಸೆತದಲ್ಲೇ ಭುವನೇಶ್ವರ್ ಕುಮಾರ್ ಗೆ ವಿಕೆಟ್ ಒಪ್ಪಿಸಿದರು. ಶಶಾಂಕ್ ಸಿಂಗ್ ಹೋರಾಟ ವ್ಯರ್ಥ ಇನ್ನು

ಈ ಇನ್ನಿಂಗ್ಸ್ ನಲ್ಲಿ ಪಂಜಾಬ್ ಪರ ಅಂತಿಮ ಹಂತದಲ್ಲಿ ಹೋರಾಟ ನಡೆಸಿದ್ದು ಶಶಾಂಕ್ ಸಿಂಗ್, ಕೇವಲ 30 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ ಅಜೇಯ 61 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಿಲಿಲ್ಲ.

ಅಂತಿಮವಾಗಿ ಪಂಜಾಬ್ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿ ಕೇವಲ 6 ರನ್ ಅಂತರದಲ್ಲಿ ಸೋಲು ಕಂಡಿತು.

ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ, ಯಶ್ ದಯಾಳ್, ಜಾಶ್ ಹೇಜಲ್ ವುಡ್ ಮತ್ತು ರೊಮಾರಿಯೋ ಶೆಫರ್ಡ್ ತಲಾ 1 ವಿಕೆಟ್ ಪಡೆದರು.

Leave a comment

Leave a Reply

Your email address will not be published. Required fields are marked *

Related Articles

ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ ಒಂದೇ ಪಂದ್ಯಾಟದಲ್ಲಿ ಹಲವು ದಾಖಲೆ

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಧೂಳಿಪಟ ಮಾಡಿದ ‘ವಿರಾಟ್ ‘ ಕೊಹ್ಲಿ! ವಿರಾಟ್ ಕೊಹ್ಲಿ ಏಷ್ಯಾದ...