ವಿಧಾನಸೌಧದ ಆವರಣದಲ್ಲಿ ರಾಜ್ಯಪಾಲರ ಸಹಿತ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಗಳಿಂದ ಆರ್‌ಸಿಬಿ ತಂಡದ ಸದಸ್ಯರಿಗೆ ಸನ್ಮಾನ

72

“ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸನ್ಮಾನಿಸಿದರು.

ಗುಜರಾತ್ ನ ಅಹ್ಮದಾಬಾದ ನಿಂದ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು.

ನಂತರ ಆರ್ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಲಾಯಿತು.

ಸಂಜೆ 4:30ಕ್ಕೆ ಖಾಸಗಿ ಹೋಟೆಲ್ನಿಂದ ಬಸ್ಗಳಲ್ಲಿ ಆರ್ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.

ಬಳಿಕ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ ಆಟಗಾರರನ್ನು ಬಸ್ನಲ್ಲಿ ಕಳುಹಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು

Leave a comment

Leave a Reply

Your email address will not be published. Required fields are marked *

Related Articles

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು...

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಅಧಿಕಾರಿಗಳಿಗೆ ಸೂಚನೆ ನೀಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ...

ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ...