ಬೆಂಗಳೂರು ವಿಜಯೋತ್ಸವ ಕಾಲ್ತುಳಿತಕ್ಕೆ ಸಿಕ್ಕಿ ಮೃತಪಟ್ಟ 11 ಮಂದಿಗೆ ಹಾಗೂ ಗಾಯಗೊಂಡ 33ಜನರಿಗಾಗಿ  ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

41

ಜೂನ್ 4: ಆರ್ ಸಿ ಬಿ ವಿಜಯೋತ್ಸವದ ವೇಳೆ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ಕೂಡ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಅನುಕಂಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡ ಇಂದು ನಡೆದ ಘಟನೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದು, ಈ ದುರಂತ ಸಂಭವಿಸಬಾರದಿತ್ತು. ನನಗೂ ಬಹಳ ದುಃಖವಾಗಿದೆ.

ನಿರೀಕ್ಷೆಗೂ ಮೀರಿ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಇಂತಹ ದುರಂತವನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮೃತಪಟ್ಟವರಲ್ಲಿ ಹೆಚ್ಚಿನವರು ಯುವಕ-ಯುವತಿಯರೇ ಆಗಿದ್ದಾರೆ. ಒಂದು ಮಗು ಕೂಡ ಮೃತಪಟ್ಟಿದೆ. ಈ ಘಟನೆಗೆ ಕಾರಣವೇನೆಂಬ ಬಗ್ಗೆ ವರದಿ ನೀಡಲು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತದ ನಂತರ ಅನೇಕರು ಜೀವಕ್ಕಾಗಿ ಹೋರಾಡುತ್ತಿದ್ದಾರೆ. ಜನಸಂದಣಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ಮೂಲಭೂತ ವ್ಯವಸ್ಥೆಗಳಿಲ್ಲ.

ಕೇವಲ ಅವ್ಯವಸ್ಥೆಯೇ ಎದ್ದು ಕಾಣುತ್ತಿತ್ತು. ಅಮಾಯಕರು ಸಾಯುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರೀಲ್‌ಗಳನ್ನು ಚಿತ್ರೀಕರಿಸುವಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು.

ಇದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡು. ಇದು ಕ್ರಿಮಿನಲ್ ನಿರ್ಲಕ್ಷ್ಯ. ಕಾಂಗ್ರೆಸ್ ಸರ್ಕಾರದ ಕೈಗಳಲ್ಲಿ ರಕ್ತವಿದೆ ಎಂದು ಬಿಜೆಪಿ ಟೀಕಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...