ಕಾಲ್ತುಳಿತದಲ್ಲಿ ಮಡಿದ ತನ್ನ ಅಭಿಮಾನಿಗಳಿಗೆ ತಲಾ  ಹತ್ತು ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

3

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದೆ.

ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಈ ವೇಳೆ ದುರಂತ ಘಟನೆ ಸಂಭವಿಸಿದೆ.

ಘಟನೆಯಲ್ಲಿ 11 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್‌ಸಿಬಿ, ‘ಬೆಂಗಳೂರಿನಲ್ಲಿ ನಿನ್ನೆ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ.

ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಘಟನೆಯಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ’ ಎಂದು ಹೇಳಿದೆ.

ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ‘ಆರ್‌ಸಿಬಿ ಕೇರ್ಸ್’ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ.

ನಾವು ಮಾಡುವ ಪ್ರತಿಯೊಂದು ಕೆಲಸದಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ. ಈ ದುಃಖದ ಸಂದರ್ಭದಲ್ಲಿ ನಾವು ಒಗ್ಗಟ್ಟಿನಿಂದ ಇರುತ್ತೇವೆ ಎಂದು ಹೇಳಿದೆ.

Leave a comment

Leave a Reply

Your email address will not be published. Required fields are marked *

Related Articles

900ವರ್ಷ ಪುರಾತನ ಹಿಂದೂ ದೇವಾಲಯಕ್ಕಾಗಿ ಥಾಯ್ಲೆಂಡ್-ಕಾಂಬೋಡಿಯಾ ಸಂಘರ್ಷ

ನವದೆಹಲಿ: ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ತೀವ್ರ ಸೇನಾ ಸಂಘರ್ಷ ಆರಂಭವಾಗಿದ್ದು, ಕಾಂಬೋಡಿಯಾ ಮೇಲೆ ಥಾಯ್ಲೆಂಡ್...

ಬಡ ಜನರಿರುವ ಗ್ರಾಮವನ್ನು ದತ್ತು ಸ್ವೀಕಾರ ಮಾಡಿದ  ಡಾಕ್ಟರ್ ರಾಜನ್ ದೇಶಪಾಂಡೆ ನೇತೃತ್ವದ ಸಂಸ್ಥೆ

“ಅತೀವ್ರ ಬಡತನದಿಂದ ನಲುಗಿರುವ ಧಾರವಾಡ ಜಿಲ್ಲೆಯ ಗ್ರಾಮವೊಂದನ್ನು ಡಾ. ರಾಜನ್ ದೇಶಪಾಂಡೆ ನೇತೃತ್ವದ ವಿಟ್ಟಲ್ ಮಕ್ಕಳ...

ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ (ಎನ್‌ಐಟಿಕೆ) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳ...