ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ ಉದ್ಘಾಟಿಸಿದ ::ಪ್ರಧಾನಿ ನರೇಂದ್ರ ಮೋದಿ

69

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು

. ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ.

ಈ ಕಾರ್ಯಕ್ರಮ ನಂತರ ಪ್ರಧಾನಿಯವರು ಕತ್ರಾದಿಂದ ಶ್ರೀನಗರಕ್ಕೆ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.

ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆಯು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಪ್ರಬಲ ಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ.

ಇದು ಜಮ್ಮು-ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವುದು. ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆಗಳು ಬೇಕಾಗುತ್ತದೆ,

ಇದು ಈಗಿನ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ. 272 ಕಿಮೀ ಉದ್ದದ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ಯೋಜನೆಯನ್ನು ಪ್ರಧಾನ ಮಂತ್ರಿಗಳು ರಾಷ್ಟ್ರಕ್ಕೆ ಅರ್ಪಿಸಲಿದ್ದು, ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾದಿಂದ ಶ್ರೀನಗರಕ್ಕೆ ಮತ್ತು ಶ್ರೀನರದಿಂದ ಕತ್ರಾಗೆ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...