ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ  ಪ್ರಕರಣ ತನಿಖೆಗೆಮಾಜಿ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಆಯೋಗ

75

“ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ಸಂದರ್ಭದಲ್ಲಿ 11 ಮಂದಿ ಆರ್’ಸಿಬಿ ಅಭಿಮಾನಿಗಳನ್ನು ಬಲಿ ಪಡೆದ,

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು,

ಇದರಂತೆ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚನೆ ಮಾಡಿದೆ.


ಜೂನ್ 5 ರಂದು ಈ ತನಿಖಾ ಆಯೋಗವನ್ನು ರಚನೆ ಮಾಡಲಾಗಿದ್ದು, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

ಕೋವಿಡ್ ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು.


ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ನಂತರ ವಿಚಾರಣಾ ಆಯೋಗದ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿತ್ತು, ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 30 ರವರೆಗೆ ವಿಸ್ತರಣೆ ಮಾಡಿತ್ತು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಖರೀದಿಯಲ್ಲಿನ ಅಕ್ರಮಗಳು ಮತ್ತು ದುರುಪಯೋಗದಿಂದಾಗಿ ಸಂಭವಿಸಿದ ಸರಣಿ ಸಾವುಗಳ ಪ್ರಕರಣವನ್ನು ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವ ಆಯೋಗ ತನಿಖೆ ನಡೆಸುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿ ಮಂಡನೆ

“ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ...

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...