ಮಂಗಳೂರು- ಬೆಂಗಳೂರು ಹೈ ಸ್ಪೀಡ್ ಕಾರಿಡಾರ್ ಗೆ ಡಿಪಿಆರ್ ಕಾಮಗಾರಿಪೂರ್ಣಗೊಳಿಸಲು 18 ತಿಂಗಳ ಕಾಲಾವಕಾಶ 

4

“ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.

ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದ್ದಾರೆ.

ಕಾರಿಡಾರ್ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಪತ್ರ ಬಂದಿದ್ದು, ಡಿಪಿಆರ್ ಸಿದ್ಧಪಡಿಸುವುದಕ್ಕೆ ಏ.30ರಂದು ಗುತ್ತಿಗೆ ನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣವಾಗಲು 18 ತಿಂಗಳು ಅವಧಿ ನಿರೀಕ್ಷಿಸಲಾಗಿದೆ.

ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ಮಹತ್ವದ ಹೆಜ್ಜೆ ಇರಿಸಿರುವ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಹಾಗೂ ಹೆದ್ದಾರಿ ಸಚಿವ ಗಡ್ಕರಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಸಂಸದರು ತಿಳಿಸಿದ್ದಾರೆ

. ಈ ಹೈಸ್ಪೀಡ್ ಎಕ್ಸ್‌ಪ್ರೆಸ್ ಹೆದ್ದಾರಿಯು 4-8 ಪಥಗಳನ್ನು ಹೊಂದುವ ನಿರೀಕ್ಷೆಯಿದ್ದು, ಹಾಸನದ ಮೂಲಕ ಹಾದು ಹೋಗಲಿದೆ. ಈ ಹೆದ್ದಾರಿಯಿಂದ ಎರಡು ಮಹಾನಗರಗಳ ನಡುವಿನ ಸಾರಿಗೆ ಮೂಲಸೌಕರ್ಯ ಮತ್ತಷ್ಟು ಮೇಲ್ದರ್ಜೆಗೇರಲಿದೆ. ಸಂಚಾರ ದಟ್ಟಣೆ ಹಾಗೂ ಪ್ರಯಾಣದ ಸಮಯ ಕಡಿಮೆಯಾಗಲಿದೆ

. ಈ ಯೋಜನೆಯಿಂದ ಮಂಗಳೂರು ಮಾತ್ರವಲ್ಲದೇ ದಕ್ಷಿಣ ಕರ್ನಾಟಕಕ್ಕೆ ಹಾಗೂ ಸುತ್ತಮುತ್ತದ ನಗರಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಮಂಗಳೂರು ಬಂದರು ಹಾಗೂ ಪ್ರವಾಸೋದ್ಯಮ, ವ್ಯಾಪಾರ , ವಾಣಿಜ್ಯ ಚಟುವಟಿಕೆಗಳ ಬೆಳವಣಿಗೆಗೂ ಇನ್ನಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಶಿರಾಡಿ ಘಾಟಿಯಲ್ಲಿ ಪ್ರತ್ಯೇಕ ರೈಲು ಮಾರ್ಗ ನಿರ್ಮಿಸಲು ರೈಲ್ವೆ ಇಲಾಖೆ ಡಿಪಿಆರ್ ಸಿದ್ದಪಡಿಸಲು ಮುಂದಾಗಿದೆ.

ಇಲ್ಲಿ ರಸ್ತೆ ಮತ್ತು ರೈಲು ಮಾರ್ಗವನ್ನು ಸಮಾನಾಂತರವಾಗಿ ಅಭಿವೃದ್ದಿಸುವ ಸಾಧ್ಯತೆಗಳ ಬಗ್ಗೆ ಅನ್ವೇಷಿಸಲು ರೈಲ್ವೆ ಮಂಡಳಿ ಮತ್ತು ಎನ್‌ಎಚ್ಎಐ ಅಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿಯನ್ನು ರಚಿಸುವಂತೆ ಕೋರಿದ್ದೇನೆ’ ಎಂದು ಇದೇ ವೇಳೆ ಸಂಸದರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...