ಬಿಜೆಪಿ ಯುವ ಮೋರ್ಚಾ ಮುಖಂಡನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸುಮೋಟೋ ಪ್ರಕರಣ ದಾಖಲಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಹವಾಲ್ದಾರ್ ಬೆಟ್ಟು ಒತ್ತಾಯ

4

ಬಿಜೆಪಿ ಯುವ ಮೋರ್ಚಾ ನಾಯಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ತನ್ನ ನಾಯಕನ ರಕ್ಷಣೆಗೆ ಬಿಜೆಪಿಗರು ಮುಂದಾದರೆ ಉಗ್ರ ಪ್ರತಿಭಟನೆ ಅನಿವಾರ್ಯ : ಯುವ ಕಾಂಗ್ರೆಸ್ ಎಚ್ಚರಿಕೆ

ಹೆಬ್ರಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯೊಂದರಲ್ಲಿ ಅಧ್ಯಾಪಕನಾಗಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಪಕ್ಷ ಬಿಜೆಪಿಯ ವಿಧಾನಸಭಾ ಕ್ಷೇತ್ರದ ಉನ್ನತ ಜವಾಬ್ದಾರಿಯಲ್ಲಿರುವ ವ್ಯಕ್ತಿಯೋರ್ವ ತನ್ನದೇ ವಿದ್ಯಾ ಸಂಸ್ಥೆಯಲ್ಲಿನ ವಿದ್ಯಾರ್ಥಿನಿಗೆ ಫೋನ್ ಕಾಲ್ ನಲ್ಲಿ ನಿರ್ಜನ ಪ್ರದೇಶಕ್ಕೆ ತುಂಬಾ ಬಲವಂತವಾಗಿ ತನ್ನ ಕಾರ್ ನಲ್ಲಿ ಬರಲು ಆಹ್ವಾನಿಸುತ್ತಿರುವ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಾರ್ಕಳದಾದ್ಯಂತ ಸಾರ್ವಜನಿಕರಿಗೆ ಹಾಗೂ ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಮಕ್ಕಳ ಪೋಷಕರೆಲ್ಲರಿಗೂ ತಮ್ಮ ಮಕ್ಕಳ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಇಂತಹ ಪ್ರಾಧ್ಯಾಪಕನಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.ಎಂದು ಮಾಧ್ಯಮ ಗಳಿಗೆ ತಿಳಿಸಿದ್ದಾರೆ

ತಾನು ಕೆಲಸ ಮಾಡುತ್ತಿರುವ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳನ್ನು ಈ ರೀತಿ ಪೀಡಿಸುತ್ತಿರುವುದು ಯಾವ ರೀತಿಯ ಜಿಹಾದ್ ಅಥವಾ ಯಾವ ರೀತಿಯ ಧರ್ಮರಕ್ಷಣೆ ಎನ್ನುವುದನ್ನು ಬಿಜೆಪಿ ಸ್ಪಷ್ಟಪಡಿಸಬೇಕಾಗಿದೆ.

ಈ ಹಿಂದೆ ಅಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೆ ಪ್ರಕರಣಕ್ಕಾಗಿ ಇತನನ್ನು ಆ ವಿದ್ಯಾ ಸಂಸ್ಥೆಯು ಹೊರದಬ್ಬಿದ್ದರೂ, ಅದಾಗಿ ಸ್ವಲ್ಪ ಸಮಯದಲ್ಲೇ ಇಂತಹ ಪರಮ ಸ್ತ್ರೀ ಪೀಡಕನಿಗೆ ಕರೆದು ಪಕ್ಷದ ಉನ್ನತ ಸ್ಥಾನ ಕೊಟ್ಟ ಶಾಸಕರು ಮತ್ತು ಅವರ ಪಕ್ಷ ಈ ವ್ಯಕ್ತಿಯ ಕುರಿತು ತಮ್ಮ ನಿಲುವನ್ನು ಸ್ಪಷ್ಟ ಪಡಿಸಬೇಕಾಗಿದೆ.

ಈ ಫೋನ್ ಕಾಲ್ ನಲ್ಲಿ ಮಾತನಾಡಿರುವ ಆರೋಪ ಹೊತ್ತಿರುವ ವ್ಯಕ್ತಿಯನ್ನು ಪರೋಕ್ಷವಾಗಿ ಬಿಜೆಪಿಗರು ರಕ್ಷಿಸಲು ಮುಂದಾದದ್ದು ಪ್ರಜ್ಞಾವಂತ ನಾಗರಿಕರ ಪಾಲಿನ ದುರಂತ ಎಂದರೆ ಖಂಡಿತ ತಪ್ಪಾಗಲಾರದು. ಬಿಜೆಪಿ ಪಕ್ಷಕ್ಕೆ ಹಾಗೂ ಕಾರ್ಕಳ ಶಾಸಕರಿಗೆ ನೈತಿಕತೆ ಇದ್ದಲ್ಲಿ ಈ ಕೂಡಲೇ ಆತನನ್ನು ತಮ್ಮ ಪಕ್ಷದಿಂದ ಉಚ್ಚಾಟನೆ ಮಾಡಬೇಕು .

ಒಂದು ವೇಳೆ ಈ ಕೂಡಲೇ ಆತನನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡದೇ ಇದ್ದಲ್ಲಿ ಇಂತಹ ಕಾಮುಕರಿಗೆ ರಕ್ಷಣೆ ನೀಡಿದಂತಾಗುತ್ತದೆ.

ಹಾಗಾಗಿ ಈ ಕೂಡಲೇ ಬಿಜೆಪಿಯು ಈತನನ್ನು ಉಚ್ಚಾಟನೆ ಮಾಡದೇ ಇದ್ದಲ್ಲಿ ಕಾರ್ಕಳ ಬಿಜೆಪಿ ಕಚೇರಿ ಹಾಗೂ ಶಾಸಕ ಸುನಿಲ್ ಕುಮಾರ್ ರವರ ಕಚೇರಿ ಎದುರುಗಡೆ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ ಹವಾಲ್ದಾರ್ ಬೆಟ್ಟು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...