ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆದೇಶ

77

“ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ನಿರ್ದೇಶನ ನೀಡಿದ್ದಾರೆ.

ಬಾಂಗ್ಲಾದೇಶದ ಗಡಿಯಲ್ಲಿರುವ ಮುಸ್ಲಿಂ ಬಹುಸಂಖ್ಯಾತ ಈ ಜಿಲ್ಲೆಗೆ ರಾಜ್ಯ ಸರ್ಕಾರವು ಆರ್‌ಎಎಫ್ ಮತ್ತು ಸಿಆರ್‌ಪಿಎಫ್ ಸೇರಿದಂತೆ ಅರೆಸೈನಿಕ ಪಡೆಗಳನ್ನು ನಿಯೋಜಿಸುತ್ತಿದೆ.

ಬಾಂಗ್ಲಾದೇಶ ಪರ ಪೋಸ್ಟರ್ ಅಭಿಯಾನ ಮತ್ತು ಹನುಮಾನ್ ದೇವಾಲಯದಲ್ಲಿ ಹಸುವಿನ ತಲೆ ಪತ್ತೆಯಾದ ನಂತರ ಉದ್ವಿಗ್ನತೆ ಭುಗಿಲೆದ್ದಿದ್ದು, ನಂತರ ರಾತ್ರಿ ವೇಳೆ ಕಲ್ಲು ತೂರಾಟದ ಘಟನೆಗಳು ನಡೆದಿವೆ.

ಹೆಚ್ಚುತ್ತಿರುವ ಅಶಾಂತಿಯ ಮಧ್ಯೆ, ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಪಟ್ಟಣಕ್ಕೆ ಭೇಟಿ ನೀಡಿದರು. ತೊಂದರೆ ಉಂಟುಮಾಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಸಿದರು. “

ನಮ್ಮ ದೇವಾಲಯಗಳಿಗೆ ಹಾನಿ ಮಾಡುವ ಉದ್ದೇಶದಿಂದ ಧುಬ್ರಿಯಲ್ಲಿ ಒಂದು ನಿರ್ದಿಷ್ಟ ಗುಂಪು ಸಕ್ರಿಯವಾಗಿದೆ. ಸಂಜೆ 6 ಗಂಟೆಯ ನಂತರ ಕಂಡಲ್ಲಿ ಗುಂಡು ಹಾರಿಸುವ ಆದೇಶ ಜಾರಿಗೊಳಿಸಲಾಗುತ್ತದೆ. ಕಲ್ಲು ತೂರಾಟ ನಡೆಸುತ್ತಿರುವವರನ್ನು ಸ್ಥಳದಲ್ಲೇ ಬಂಧಿಸಲಾಗುತ್ತದೆ” ಎಂದು ಸಿಎಂ ಹೇಳಿದರು.

ಬಾಂಗ್ಲಾದೇಶಕ್ಕೆ ಧುಬ್ರಿ ಸೇರಿಸಬೇಕು ಎಂದು ಪ್ರತಿಪಾದಿಸುವ “ನಬಿನ್ ಬಾಂಗ್ಲಾ” ಗುಂಪು ಈದ್ ಹಬ್ಬದಂದು ಪೋಸ್ಟರ್‌ಗಳನ್ನು ಹಾಕಿದೆ. ಇದು ಗಡಿಯಾಚೆಗಿನ ಪ್ರಭಾವದ ಸಂಕೇತವಾಗಿದೆ ಎಂದು ಶರ್ಮಾ ತಿಳಿಸಿದರು

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...