ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಆರಂಭಿಸಿದ ಎನ್ ಐಎ

67

“ಮೇ 1 ರಂದು ಬಜ್ಪೆ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿದ್ದು, ಶನಿವಾರ ಎನ್ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ.

ಎನ್‌ಐಎ ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ನೇತೃತ್ವದ ತಂಡ, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಪ್ರಾರಂಭಿಸಿದೆ.

ಮಂಗಳೂರು ಪೊಲೀಸರು ಎನ್‌ಐಎ ತಂಡದ ಆಗಮನವನ್ನು ದೃಢಪಡಿಸಿದ್ದು, ಪ್ರಾಥಮಿಕ ಮಾಹಿತಿಯನ್ನು ನಗರ ಅಪರಾಧ ಶಾಖೆ(ಸಿಸಿಬಿ) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಪ್ರಕರಣವನ್ನು NIA ಗೆ ವರ್ಗಾಯಿಸಿತ್ತು. ಅಧಿಕೃತ ಮೂಲಗಳ ಪ್ರಕಾರ, ಸುಹಾಸ್ ಶೆಟ್ಟಿ ಅವರ “ಹತ್ಯೆ”, “ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸುವ” ಉದ್ದೇಶಿತ ಕೃತ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎನ್ಐಎ ನಿರ್ದೇಶನ ನೀಡಿತ್ತು

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...