ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

80

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ ಬದಲಾವಣೆ ಆಗುತ್ತದೆ.

ಡಿ.ಕೆ ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಶನಿವಾರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಶ್ವನಾಥ್ ಅವರು, ಸಿಎಂ ಸಿದ್ದರಾಮಯ್ಯ ಅವರು ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು.

ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು.

ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು. ಜಾತಿಗಣತಿ ಮಾಡಲು ಶಿಕ್ಷಕರು ಬೇಕು

. ಆದರೆ ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ

. ಆದರೆ ಮುಂದಿನ ನವೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವೋಟು ಪಡೆದು ಎರಡನೇ ಸಲ ಮುಖ್ಯಮಂತ್ರಿಯಾದವರು.

ಅಹಿಂದ ವರ್ಗದವರಿಗೆ ಸುಳ್ಳು ಹೇಳುತ್ತಿದ್ದಾರೆ, ಜಾತಿ ಗಣತಿ ಮರುಸರ್ವೇಯನ್ನು ಅವರು ಮೂರು ತಿಂಗಳಲ್ಲಿ ಮಾಡಿಸೋದು ಹೇಗೆ ಸಾಧ್ಯ?

ಮರು ಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಆದರೆ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು ಎಂದು ವಾಗ್ದಾಳಿ ನಡೆಸಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ.

ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ ಎಂದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...