ಇಂಪಲ್ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ 300ಕ್ಕೂ ಹೆಚ್ಚು ಬಂದೂಕು ಹಾಗೂ ಅಪಾರ ಪ್ರಮಾಣದ ಮದ್ದು ಗುಂಡು ವಶಪಡಿಸಿಕೊಂಡ ಸೇನೆ

4

“ಜೂನ್ 13 ಮತ್ತು 14 ರ ಮಧ್ಯರಾತ್ರಿ ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪುರ ಪೊಲೀಸರು ಮತ್ತು ಭದ್ರತಾ ಪಡೆಗಳು 300ಕ್ಕೂ ಹೆಚ್ಚು ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಒಟ್ಟಾರೆಯಾಗಿ 328 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪೈಕಿಎಸ್‌ಎಲ್‌ಆರ್ 151, ಐಎನ್‌ಎಸ್‌ಎಎಸ್ 65, ಇತರ ರೀತಿಯ ರೈಫಲ್‌ಗಳು 73, ಕಾರ್ಬೈನ್‌ಗಳು 5, ಎಂಪಿ5 ಎರಡು, ಎಲ್‌ಎಂಜಿ 12, ಎಕೆ ಸರಣಿ ರೈಫಲ್‌ಗಳು 6, ಅಮೋಘ ರೈಫಲ್‌ಗಳು ಎರಡು, ಮಾರ್ಟರ್ ಒಂದು, ಪಿಸ್ತೂಲ್‌ಗಳು 6, ಬ್ಯಾರೆಲ್‌ಗಳು ಎರಡು, ಎಆರ್ 15 ಗನ್ ಒಂದು ಮತ್ತು ಫ್ಲೇರ್ ಗನ್‌ಗಳು ಎರಡು ಸೇರಿವೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಲಾರಿ ದೋರ್ಜಿ ಲಾಟೂ ಅವರ ಪ್ರಕಾರ, ಇಂಫಾಲ್ ಕಣಿವೆ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದೊಡ್ಡ ಸಂಗ್ರಹದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮಣಿಪುರ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಜಂಟಿ ತಂಡಗಳು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

“ಗುಪ್ತಚರ ಮಾಹಿತಿ ಆಧಾರಿತ ಈ ಕಾರ್ಯಾಚರಣೆ, ಮಣಿಪುರ ಪೊಲೀಸ್ ಮತ್ತು ಭದ್ರತಾ ಪಡೆಗಳು ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ನಾಗರಿಕರು ಮತ್ತು ಅವರ ಆಸ್ತಿಯ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳಲ್ಲಿ ಪ್ರಮುಖ ಸಾಧನೆಯನ್ನು ಗುರುತಿಸುತ್ತದೆ” ಎಂದು ಮಣಿಪುರ ಪೊಲೀಸರು ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...