ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 114 ಮುಸ್ಲಿಂ ಉದ್ಯೋಗಿಗಳ ವಜಾ

77

“ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 114 ಮುಸ್ಲಿಂ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ.

ಶಿಸ್ತು ಉಲ್ಲಂಘನೆ, ಅಕ್ರಮಗಳನ್ನು ಉಲ್ಲೇಖಿಸಿ 114 ಮುಸ್ಲಿಮರು ಸೇರಿದಂತೆ 167 ಉದ್ಯೋಗಿಗಳನ್ನು ದೇವಾಲಯದ ಟ್ರಸ್ಟ್ ವಜಾಗೊಳಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಈ ಸಿಬ್ಬಂದಿಗಳು ಕೆಲವು ಸೇವಾ ಮತ್ತು ಶಿಸ್ತಿನ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದ್ದರಿಂದ ಈ ನಿರ್ಧಾರವನ್ನು ಸಂಪೂರ್ಣವಾಗಿ ಆಡಳಿತಾತ್ಮಕ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧಿಕಾರಿಯೊಬ್ಬರು ಹೇಳಿದರು

ದೇವಾಲಯದ ಆವರಣದಲ್ಲಿ ಮುಸ್ಲಿಂ ಸಿಬ್ಬಂದಿ ಇರುವುದನ್ನು ವಿರೋಧಿಸಿ ಇತ್ತೀಚಿಗೆ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದ್ದವು. ಶನಿ ದೇವರ ದೇವಾಲಯದಲ್ಲಿ ಹಿಂದೂಯೇತರ ಕೆಲಸಗಾರರು ಇರುವುದು ಸರಿಯಲ್ಲ ಎಂದು ಈ ಗುಂಪುಗಳು ಹೇಳಿದ್ದವು.

ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಜೂನ್ 14 ರಂದು ದೇವಸ್ಥಾನದ ಹೊರಗೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸಮುದಾಯ ಎಚ್ಚರಿಕೆ ನೀಡಿತ್ತು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಧರ್ಮದ ಆಧಾರದ ಮೇಲೆ ಉದ್ಯೋಗಿಗಳನ್ನು ವಜಾಗೊಳಿಸಿಲ್ಲ ಎಂದು ದೇವಾಲಯ ಟ್ರಸ್ಟ್ ಹೇಳಿಕೊಂಡರೂ ವಜಾಗೊಂಡವರಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಉದ್ಯೋಗಿಗಳೇ ಇದ್ದಾರೆ

. ಶನಿ ಶಿಂಗ್ನಾಪುರ ದೇವಾಲಯ ದೀರ್ಘಕಾಲದಿಂದ ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...