ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಕರಾವಳಿಯಲ್ಲಿ ಭಾರಿ ಮಳೆ ರೆಡ್ ಅಲರ್ಟ್ ಘೋಷಣೆ

62

ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದರಿಂದ, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ  ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಜೂನ್ 17 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದ್ದು, ಜೂನ್ 18 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಕರ್ನಾಟಕದ ಇತರ ಸ್ಥಳಗಳಿಗೆ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.

ಶನಿವಾರ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆಯಾಗಿದೆ. ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದಿನ ವಾರ ಕರಾವಳಿ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜೂನ್ 17 ರವರೆಗೆ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.

ಜೂನ್ 19 ಮತ್ತು 20 ರ ವೇಳೆಗೆ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ವಾರದ ಮಧ್ಯಭಾಗದವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು,

ವಾರಾಂತ್ಯದವರೆಗೆ ಸಾಧಾರಣ ಮಳೆ ಮುಂದುವರಿಯಬಹುದು. ಜೂನ್ 21 ರಿಂದ ರಾಜ್ಯಾದ್ಯಂತ ಮಳೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...