ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಘರ್ ವಾಪಾಸಿ

57

“ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.


ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದು, ಇದೀಗ ಮರಳಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ

. ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು…ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದು ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವೆಂಕಟೇಶ್ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ.

ತಾನು ಯಾವುದು ಕೈಹಿಡಿತಿರಲಿಲ್ಲವಂತೆ. ಇದರ ನಡುವೆ ವೆಂಕಟೇಶ್ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದನಂತೆ.

ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದನಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರಿಶ್ಚಿಯನ್ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾಗಿ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...