ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

56

” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI 2749 F ವಿಮಾನದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಲಗೇಜ್ ಸೀಟ್ ಬಳಿ ಇರಿಸಿದ್ದಕ್ಕೆ ವಿಮಾನ ಸಿಬ್ಬಂದಿ ಪ್ರಶ್ನಿಸಿದಾಗ ಅನುಚಿತವಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ. ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಮಹಿಳೆ ಅದನ್ನು ಪ್ರಶ್ನಿಸಿದ ಸಹ ಪ್ರಯಾಣಿಕರ ಮೇಲೂ ಹಲ್ಲೆ ಮಾಡಿದ್ದಾರೆ.

ಮೂಲಗಳ ಪ್ರಕಾರ ಯಲಹಂಕ ಮೂಲದ ವ್ಯಾಸ್ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ ಇಡೀ ಗಲಾಟೆಯ ಕೇಂದ್ರ ಬಿಂದುವಾಗಿದ್ದು, ಜೂನ್ 17ರಂದು ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಎರ್ ಇಂಡಿಯಾ ವಿಮಾನದಲ್ಲಿ ತಮ್ಮ ಲಗೇಜ್ ಅನ್ನು ಲಗೇಜ್ ಬಾಕ್ಸ್ ನಲ್ಲಿ ಇಡದೇ ತಮ್ಮ ಸೀಟ್ ನ ಪಕ್ಕದಲ್ಲಿ ಇರಿಸಿಕೊಂಡಿದ್ದಾರೆ. ಇದರಿಂದ ಇತರೆ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಸಿಬ್ಬಂದಿಗೆ ದೂರಿದ್ದಾರೆ.

ವಿಮಾನ ತಜ್ಞರು ಹೇಳೋದೇನು? ಬಳಿಕ ಮಹಿಳೆಯ ಬಳಿ ಬಂದ ಸಿಬ್ಬಂದಿ ಲಗೇಜ್ ಅನ್ನು ಲಗೇಜ್ ಬಾಕ್ಸ್ ನಲ್ಲಿಡುವಂತೆ ಸೂಚಿಸಿದ್ದಾರೆ. ಈ ವೇಳೆ ಮಹಿಳೆ ವಾಕ್ಸಮರ ನಡೆಸಿದ್ದಾರೆ.

ಸಿಬ್ಬಂದಿಯ ಜೊತೆ ಕಿರಿಕ್ ಮಾಡಿದ ಮಹಿಳೆ, ಸಹ ಪ್ರಯಾಣಿಕರೊಂದಿಗೂ ರಂಪಾಟ ಮಾಡಿದ್ದಾಳೆ. ವಿಮಾನ ಸಿಬ್ಬಂದಿ ಮಹಿಳೆಯನ್ನು ಇಳಿಸಿ ವಿಮಾನ ನಿಲ್ದಾಣ ಪೊಲೀಸರ ವಶಕ್ಕೆ ನೀಡಿದ್ದಾರೆ

. ಅಷ್ಟಕ್ಕೂ ಸುಮ್ಮನಾಗದ ಮಹಿಳೆ ಪೊಲೀಸ್ ಠಾಣೆಯಲ್ಲೂ ಕಿರಿಚಾಡಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪವಿದೆ.

ಸದ್ಯ ಮಹಿಳೆ ವಿರುದ್ಧ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕೆಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ವಿಮಾನದಲ್ಲಿನ ಮಹಿಳೆಯ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...