ತಳಮಟ್ಟದಿಂದ ಪಕ್ಷ ಸಂಘಟನೆ 2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭಿಸಿದ ಬಿಜೆಪಿ

8

2028 ರ ವಿಧಾನಸಭಾ ಚುನಾವಣೆ ಗೆಲ್ಲುವ ಗುರಿ ಹೊಂದಿರುವ ರಾಜ್ಯ ಬಿಜೆಪಿ, ಪಕ್ಷ ಸಂಘಟನೆಗೆ ಮುಂದಾಗಿದೆ. ಇದರಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗುತ್ತಿದೆ.

ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿದರು. ಇದೇ ವೇಳೆ ಎಲ್ಲ ಜಿಲ್ಲಾಧ್ಯಕ್ಷರಿಗೆ ನಿಯುಕ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.

ಬಳಿಕ ಮಾತನಾಡಿರುವ ಅವರು, ನೂತನ ಅಧ್ಯಕ್ಷರು ತಮ್ಮ ಜಿಲ್ಲೆಗಳ ವ್ಯಾಪ್ತಿಯ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮಳೆಗಾಲದ ಸಂಕಷ್ಟಗಳು, ರೈತರ ಸಮಸ್ಯೆಗಳು, ಕೋಮು ಘರ್ಷಣೆಗಳು ಮುಂತಾದ ಸ್ಥಳೀಯ ಸಮಸ್ಯೆಗಳ ಕುರಿತು ಧ್ವನಿ ಎತ್ತಬೇಕು.

ಹೋರಾಟಗಳಲ್ಲಿ ಜನರೂ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯ ನಾಯಕರು ಧ್ವನಿ ಎತ್ತಲು ರಾಜ್ಯ ಹಾಗೂ ರಾಷ್ಟ್ರೀಯದ ಹಲವು ವಿಚಾರಗಳಿವೆ.

ಪ್ರತಿ ಜಿಲ್ಲೆಗೆ ಸಂಬಂಧಿಸಿದ ಹಲವು ಸಮಸ್ಯೆಗಳೂ ಇವೆ. ಜಿಲ್ಲಾಧ್ಯಕ್ಷರು ಮತ್ತು ಶಾಸಕರು ಈ ಕುರಿತು ಧ್ವನಿ ಎತ್ತಬೇಕು. ಈ ಮೂಲಕ ಜನರನ್ನು ತಲುಪಬೇಕು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ‘

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಮೂಲಕ ಅಧಿಕಾರಕ್ಕೆ ಬರಲು ಬಯಸುತ್ತಿದೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷ ಮಾತ್ರವಲ್ಲ, ಪ್ರಧಾನಿ ಮೋದಿಯವರ ರಾಯಭಾರಿಗಳೂ ಕೂಡ ಆಗಿದ್ದೇವೆಂದು ನಾವು ಜಿಲ್ಲಾಧ್ಯಕ್ಷರಿಗೆ ಹೇಳಿದ್ದೇವೆ.

ಪಕ್ಷವನ್ನು ಬಲಪಡಿಸುವ ಮತ್ತು ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವತ್ತ ನಾವು ಕೆಲಸ ಮಾಡಬೇಕಾಗಿದೆ ಎಂದು ತಿಳಿಸಲಾಗಿದೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.

ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಅಧ್ಯಕ್ಷರಿಗೆ ನಿರ್ದೇಶನ ನೀಡಲಾಗಿದೆ. ಸುಮ್ಮನೆ ಕುಳಿತುಕೊಳ್ಳದೆ, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ತಿಳಿಸಲಾಗಿದೆ. ಬಿಬಿಎಂಪಿ/ಜಿಬಿಎ ಚುನಾವಣೆಗಳ ಜೊತೆಗೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳು ಹತ್ತಿರ ಬರುತ್ತಿದ್ದು, ಪಕ್ಷವನ್ನು ಬಲಪಡಿಸಲು ಮತ್ತು ಮತ್ತೆ ಅಧಿಕಾರಕ್ಕೆ ಬರಲು ಈ ಚುನಾವಣೆಗಳಲ್ಲಿ ಗೆಲ್ಲುವ ಅವಶ್ಯಕತೆಯಿದೆ ಎಂದೂ ತಿಳಿಸಿದ್ದಾರೆ.

ಮುಂದಿನ ಕೆಲವು ದಿನಗಳಲ್ಲಿ ರಾಜ್ಯ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಜುಲೈನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಪಕ್ಷದ ನಾಯಕರು ಜಿಲ್ಲಾ ಮಟ್ಟದಲ್ಲಿ ಸದನದ ಒಳಗೆ ಮತ್ತು ಹೊರಗೆ ಸಮಸ್ಯೆಗಳ ಹಿಡಿದು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ನಿರೀಕ್ಷೆಯಿದೆ

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...