ಉಡುಪಿ ಜಿಲ್ಲಾ ನೂತನ ಪೊಲೀಸವರಿಷ್ಠಾಧಿಕಾರಿಯವರನ್ನು ಬೇಟಿ ಮಾಡಿ ಅಭಿನಂದಿಸಿದ ಉಡುಪಿ ವಕೀಲರ ನಿಯೋಗ

62

*ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ. 23ರಂದು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು

. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು.

ಮತ್ತು ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು

. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಶ್ರೀ ರಾಜೇಶ್ ಎ.ಆರ್., ಶ್ರೀ ಬೈಲೂರು ರವೀಂದ್ರ ದೇವಾಡಿಗ, ಶ್ರೀ ಸಂತೋಷ್ ಮೂಡುಬೆಳ್ಳೆ, ಶ್ರೀ ಜಯಕೃಷ್ಣ ಆಳ್ವ ಮತ್ತು ಶ್ರೀ ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.*

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...