ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್ ಮ್ಯಾನ್, ಚಾಲಕನ ವಿರುದ್ಧ ಎಫ್ಐಆರ್

70
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ  ಅವರ ಕಾರು ಚಾಲಕ ಹಾಗೂ ಗನ್ ಮ್ಯಾನ್ ಮೇಲೆ ಎಫ್ಐಆರ್ ದಾಖಲಾಗಿದೆ.


ಅನಂತ ಕುಮಾರ್ ಹೆಗಡೆ ಪುತ್ರ ಅಶುತೋಷ್, ಗನ್‌ಮ್ಯಾನ್‌ ಶ್ರೀಧರ್, ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು ಆ ಸಂಬಂಧ ದೂರು ದಾಖಲಾಗಿದೆ.

ಘಟನೆ ವೇಳೆ ಅನಂತ ಕುಮಾರ್ ಹೆಗಡೆ ಸಹ ಕಾರಿನಲ್ಲಿದ್ದು, ಅವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ನಿಜಗಲ್ ಬಳಿ ನಡೆದಿದ್ದೇನು? ಅನಂತ್‌ ಕುಮಾರ್‌ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್ಮ್ಯಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನೋವಾ ಕಾರಿನಲ್ಲಿ ಸಲ್ಮಾನ್, ಸೈಫ್‌, ಇಲಿಯಾಜ್ ಖಾನ್‌ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರಿಗೆ ದಾಬಸ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅನಂತಕುಮಾರ್ ಹೆಗಡೆ ಹೇಳಿದ್ದೇನು? ಘಟನೆ ಬಳಿಕ ನೆಲಮಂಗಲ ಗ್ರಾಮಾಂತರ ಠಾಣೆಯ ಡಿವೈಎಸ್ಪಿ ಕಚೇರಿಯಲ್ಲಿ ಅನಂತ್ ಕುಮಾರ್ ಹೆಗಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

ಇದೇ ವೇಳೆ ಅವರು, ಓವರ್ ಟೇಕ್‌ ವೇಳೆ ಕಾರಿಗೆ ಮತ್ತೊಂದು ಕಾರ್ ಟಚ್ ಆಗಿದ್ದಕ್ಕೆ ಗಲಾಟೆ ನಡೆದೆ ಎಂದು ತಿಳಿಸಿದ್ದಾರೆ. ತಾವು ಕಾರಿನಲ್ಲಿದ್ದುದಾಗಿಯೂ, ಹಲ್ಲೆ ಮಾಡಿಲ್ಲ ಎಂದೂ ಅವರು ಸ್ಪಷ್ಟನೆ ನೀಡಿದ್ದಾರೆ.

ದಾಬಸಪೇಟೆ ಪೊಲೀಸ್ ಠಾಣೆ ಬಳಿ ರಾತ್ರಿ ಹೈಡ್ರಾಮಾ ಘಟನೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಪೊಲೀಸ್ ಠಾಣೆ ಬಳಿ ರಾತ್ರಿಯೇ ಜನರು ದೌಡಾಯಿಸಿದರು. ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಕೂಡ ಆಗಮಿಸಿದರು.

ಠಾಣೆ ಎದುರು ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿತ್ತು.  ಹಲ್ಲೆಗೊಳಗಾಗಿದ್ದ ಸೈಫ್ ನೀಡಿದ ದೂರಿನ ಮೇರೆಗೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅನಂತಕುಮಾರ್ ಹೆಗಡೆ A1, ಗನ್‌ಮ್ಯಾನ್ ಶ್ರೀಧರ್‌ A2, ಕಾರು ಚಾಲಕ ಮಹೇಶ್‌ A3 ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಎನ್ಎಸ್ ಕಾಯ್ದೆಯ 6 ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...