ಮಂಗಳೂರು ಸಂಚಾರಿ ನಿಯಮ ಪಾಲನೆ ಮಾಡದೆ ದಂಡ ಪಾವತಿಗೆ ನೋಟಿಸ್ ಜಾರಿಯಾದ ವಾಹನ ಮಾಲಕರು ಜುಲೈ 15ರೊಳಗೆ ದಂಡಪಾವತಿಸುವಂತೆ ಸೂಚನೆ ಮಂಗಳೂರು ನಗರ ಪೊಲೀಸ್

36

ಮಂಗಳೂರು ನಗರ ವಾಹನ ಸಂಚಾರದಲ್ಲಿ ನಿಯಮಗಳನ್ನು ಮೀರಿ ದಂಡಕ್ಕೆ ಗುರಿಯಾಗಿದ್ದ ಅಂಚೆ ಇಲಾಖೆ ಮುಖಾಂತರ ನೋಟಿಸ್ ಜಾರಿಯಾಗಿದ್ದ ವಾಹನ ಮಾಲಕರಿಗೆ ಜುಲೈ 15 2025ರ ಒಳಗೆ ದಂಡ ಪಾವತಿಸುವಂತೆ ಸೂಚನೆ ನೀಡಲಾಗಿದೆ

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ & ಕಮಾಂಡ್ ಸೆಂಟರ್ನನಲ್ಲಿ ಸಿಸಿಟಿವಿ ಯಲ್ಲಿ ಸೆರೆಯಾಗಿರುವ ವಾಹನ ಚಾಲಕ/ಸವಾರರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ.

ವಾಹನ ಚಾಲಕರು/ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು ಬಾಕಿ ಇರುತ್ತದೆ.

ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ಧ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದು, ಪ್ರಥಮ ಹಂತವಾಗಿ ದಂಡ ಪಾವತಿ ಮಾಡಲು ವಾಹನ ನೋಂದಣಿ ಮಾಲೀಕರಿಗೆ ನೋಟಿಸ್ ಈಗಾಗಲೇ ಅಂಚೆ ಮೂಲಕ ನೋಟಿಸ್ ಕಳುಹಿಸಲಾಗಿದ್ದು,

ದಿನಾಂಕ 15-07-2025 ರ ಒಳಗಾಗಿ ದಂಡ ಪಾವತಿಸಲು ವಿಫಲರಾದ್ದಲ್ಲಿ, ಸಂಚಾರ ನಿಯಮ ಉಲ್ಲಂಘನೆಯ ಕುರಿತು ನೋಂದಣಿ ಮಾಲಕರ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಲಾಗುವುದು. ನಂತರ ನ್ಯಾಯಾಲಯದಿಂದ ಹೊರಡಿಸುವ ಸಮನ್ಸ್/ವಾರಂಟು ಪ್ರಕ್ರಿಯೆಗಳು ಮುಂದುವರೆಯುತ್ತದೆ.

ಆದುದ್ದರಿಂದ ನೋಟಿಸ್ ಸ್ವೀಕೃತಿಯಾಗಿರುವ ವಾಹನದ ನೋಂದಣಿ ಮಾಲಕರು ದಂಡವನ್ನು ಪಾವತಿ ಮಾಡಿ. ಮುಂದೆ ಆಗುವ ಪರಿಣಾಮಗಳಿಗೆ ಅವಕಾಶವನ್ನು ನೀಡದಂತೆ ಕೋರಲಾಗಿದೆ.

ನಿಮ್ಮ ವಾಹನವು ಮಂಗಳೂರು ನಗರದಲ್ಲಿ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದೆಯೇ ಎಂದು ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅನುಸರಿಸ ಬೇಕಾದ ವಿಧಾನಗಳು:-

ಈ ಕೆಳಕಂಡ ಸಂಚಾರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಥವಾ ದೂರವಾಣಿ ಕರೆ ಮಾಡಿ ವಿಚಾರಿಸಲು. ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

ಟ್ರಾಫಿಕ್ ಈಸ್ಟ್ ಪೊಲೀಸ್ ಸ್ಟೇಷನ್

ಕದ್ರಿ, ಮಂಗಳೂರು

0824-2220523

ಟ್ರಾಫಿಕ್ ವೆಸ್ಟ್ ಪೊಲೀಸ್ ಸ್ಟೇಷನ್

ಪಾಂಡೇಶ್ವರ, ಮಂಗಳೂರು

0824-2220524

ಟ್ರಾಫಿಕ್ ನಾರ್ತ್ ಪೊಲೀಸ್ ಸ್ಟೇಷನ್

ಬೈಕಂಪಾಡಿ, ಮಂಗಳೂರು

0824-2220833

ಟ್ರಾಫಿಕ್ ಸೌತ್ ಪೊಲೀಸ್ ಸ್ಟೇಷನ್

ಜೆಪ್ಪಿನಮೊಗೇರು, ಮಂಗಳೂರು

0824-2220850

ಎಸಿಪಿ ಟ್ರಾಫಿಕ್ ಆಫೀಸ್

ಪಾಂಡೇಶ್ವರ್, ಮಂಗಳೂರು

0824-2220823

ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸ್ ಅಧಿಕಾರಿ (ASI to PI) ಗಳಲ್ಲಿ ಇರುವ ಡಿವೈಸ್‌ ಗಳಲ್ಲಿ ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

ಕರ್ನಾಟಕ ರಾಜ್ಯದಲ್ಲಿರುವ ಯಾವುದೇ ಅಂಚೆ ಕಛೇರಿಯಲ್ಲಿ ವಿಚಾರಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

ತಮ್ಮ ಸಮೀಪದ ಯಾವುದೇ ಕರ್ನಾಟಕ-ವನ್(Karnataka One) ಕೇಂದ್ರಕ್ಕೆ ಭೇಟಿ ನೀಡಿ ದಂಡ ಪಾವತಿ ಮಾಡಬಹುದಾಗಿರುತ್ತದೆ.

ಆನ್ಲೈನ್

ಪೇಮೆಂಟ್

ಕರ್ನಾಟಕ

one:-

ಸೇವೆಯಾದ https://www.karnatakaone.gov.in/PoliceCollectionOfFine/PoliceCollectionOfFine/dGVtYitUZkgv WitkeG1VORamJWZ209 ವೆಬ್ ಸೈಟ್ / ಅಪ್ ಮೂಲಕ ಲಾಗಿನ್ ಆಗಿ ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

“ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತರಾಗಿರಿ”

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...