ಮಂಗಳೂರಿನ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ (ಎನ್‌ಐಟಿಕೆ) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 11 ತಿಂಗಳ ಅವಧಿಗೆ ಗುತ್ತಿಗೆ ಅವಧಿ ಮೇರೆಗೆ ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆ ವಿವರ
ಒಟ್ಟು ಐದು ಲೈಬ್ರರಿ ಟ್ರೈನಿ ಹುದ್ದೆಗಳು.
ವಿದ್ಯಾರ್ಹತೆ
ಅಭ್ಯರ್ಥಿಗಳು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ
ಪರ್ಯಾಯ ಪದವಿಯನ್ನು ಹೊಂದಿರಬೇಕು.
ವಯೋಮಿತಿ
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡ, ಒಬಿಸಿ, ವಿಕಲಚೇತನ ಅಭ್ಯರ್ಥಿಗಳಿಗೆ ಸರಕಾರದ ನಿಯಮದ ಅನುಸಾರ ವಯೋಮಿತಿ ಸಡಿಲಿಕೆ ಮಾಡಲಾಗುವುದು.
ಆಯ್ಕೆ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಎನ್‌ಐಟಿಕೆ
ಅರ್ಜಿ ಸಲ್ಲಿಕೆ
ಅಧಿಕೃತ ಜಾಲತಾಣದಲ್ಲಿ ಲಭ್ಯ ಇರುವ ನಿಗದಿತ ಅರ್ಜಿ ನಮೂನೆಯ ಜೊತೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಕೆ
ಮಾಡಬೇಕು:
ರಿಜಿಸ್ಟ್ರಾರ್, ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ, ಸುರತ್ಕಲ್ ಪೋಸ್ಟ್, ಶ್ರೀನಿವಾಸ ನಗರ, ಮಂಗಳೂರು- 575025.ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಜೂನ್-30 ಕೊನೆಯ ದಿನ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ವೆಬ್ ಸೈಟ್‌ನಲ್ಲಿ ಲಭ್ಯ: https://www.nitk.ac.in