ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು

. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಅವರನ್ನು ಗೌರವಿಸಲಾಯಿತು. ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ,
ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ,ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳ್,
ಕಾಪು ನಾಲ್ಕು ಪಟ್ನ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ ಸೇರಿದಂತೆ ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.