thekarnatakatoday.com
State

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಪದಬಳಕೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಎಫ್ಐಆರ್

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.

ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ರವಿಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ್ ಅವರು, “ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದಿದ್ದರು.

ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದೆ.

Related posts

ಡೀಸೆಲ್ ದರ ಏರಿಕೆ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

The Karnataka Today

ಗೃಹಿಣಿಯರನ್ನು ಸದೃಢಗೊಳಿಸುವ ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಗಳಿಸಿದೆ :: ಡಿ ಕೆ ಶಿವಕುಮಾರ್

The Karnataka Today

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವಿತರಣೆ

The Karnataka Today

Leave a Comment