ನವಜಾತ ಶಿಶು ಅಪಹರಣ ಯತ್ನ ಮಹಿಳೆ ವೇಷದಲ್ಲಿದ್ದ ವ್ಯಕ್ತಿ ಬಂಧನ ಉಳಿದವರು ಪರಾರಿ

81

“ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸುವ ಯತ್ನವನ್ನು ರೋಗಿಗಳ ಪರಿಚಾರಕರು ಮತ್ತು ಆಸ್ಪತ್ರೆಗೆ ಬಂದಿದ್ದ ಸಂದರ್ಶಕರು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಮುಂಜಾನೆ ರೋಗಿಗಳ ಪರಿಚಾರಕರು ನಿದ್ರೆಗೆ ಜಾರಿದ ಸಂದರ್ಭದಲ್ಲಿ ರಾಯಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್)ಮಹಿಳೆಯರ ವೇಷದಲ್ಲಿ ಆಗಮಿಸಿದ ಗುಂಪೊಂದು ನಾಲ್ಕನೇ ಮಹಡಿಯಲ್ಲಿರುವ ಹೆರಿಗೆ ವಾರ್ಡ್ ಗೆ ತೆರಳಿದೆ.

ಅವರಲ್ಲಿ ಓರ್ವ ನವ ಜಾತ ಶಿಶುವನ್ನು ಅಪಹರಿಸಲು ಯತ್ನಿಸಿದ್ದಾರೆ. ಆದರೆ ಸ್ಥಳದಲ್ಲಿದ್ದ ಪರಿಚಾರಕರೊಬ್ಬರು ಅನುಮಾನಗೊಂಡು ಮಧ್ಯ ಪ್ರವೇಶಿಸಿದ್ದಾರೆ. ಈ ವೇಳೆ ಮಹಿಳೆಯ ವೇಷದಲ್ಲಿದ್ದ ವ್ಯಕ್ತಿಯ ಜೊತೆಗೆ ಕೆಲಹೊತ್ತು ವಾಗ್ವಾದ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತರ ಇಬ್ಬರು ಅಪಹರಣ ಯತ್ನದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವೇಳೆ ಗೃಹರಕ್ಷಕ ಸಿಬ್ಬಂದಿ ಕರ್ತವ್ಯದಲ್ಲಿ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಂತರ ಸಾರ್ವಜನಿಕರು ಬಂಧಿತ ಆರೋಪಿಯನ್ನು ಮಾರ್ಕೆಟ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...