ದಕ್ಷಿಣ ಭಾರತೀಯರು “ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಅವರಿಗೆ ಯಾವುದೇ ಗುತ್ತಿಗೆ ನೀಡಬಾರದು ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿವಾದ

65

“ಹಳಸಿದ ಆಹಾರ ನೀಡಿದ್ದಾರೆ ಎಂದು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬುಲ್ದಾನಾ ವಿಧಾನಸಭಾ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಅವರು ಈಗ ದಕ್ಷಿಣ ಭಾರತೀಯರನ್ನು  ಗುರಿಯಾಗಿಸಿಕೊಂಡು ಹೊಸ ವಿವಾದ ಹುಟ್ಟುಹಾಕಿದ್ದಾರೆ. ದಕ್ಷಿಣ ಭಾರತೀಯರು “ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ”.

ಆದ್ದರಿಂದ ಅವರಿಗೆ ಮಹಾರಾಷ್ಟ್ರದಲ್ಲಿ ಆಹಾರ ಪೂರೈಕೆ ಗುತ್ತಿದೆ ನೀಡಬಾರದು ಎಂದು ಸಂಜಯ್ ಗಾಯಕ್ವಾಡ್ ಅವರು ಗುರುವಾರ ಹೇಳಿದ್ದಾರೆ. “

ಶೆಟ್ಟಿ ಎಂಬ ಗುತ್ತಿಗೆದಾರರಿಗೆ ಏಕೆ ಕಾಂಟ್ರ್ಯಾಕ್ಟ್ ನೀಡಲಾಯಿತು? ಅದನ್ನು ಮರಾಠಿ ವ್ಯಕ್ತಿಗೆ ನೀಡಿ. ನಾವು ಏನು ತಿನ್ನುತ್ತೇವೆ ಎಂದು ಅವರಿಗೆ ಗೊತ್ತಿದೆ ಮತ್ತು ನಮಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡುತ್ತಾರೆ.


ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಮತ್ತು ಮಹಾರಾಷ್ಟ್ರದ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ.

ಅವರು ನಮ್ಮ ಮಕ್ಕಳನ್ನು ಭ್ರಷ್ಟಗೊಳಿಸಿದ್ದಾರೆ. ಇಂತಹವರು ಉತ್ತಮ ಆಹಾರ ಹೇಗೆ ನೀಡುತ್ತಾರೆ?” ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಶಾಸಕ ಪ್ರಶ್ನಿಸಿದ್ದಾರೆ

ಮಂಗಳವಾರ ಸಂಜೆ, “ಹಳಸಿದ” ದಾಲ್ ಮತ್ತು ಅನ್ನವನ್ನು ನೀಡಿದ್ದರಿಂದ ಕೋಪಗೊಂಡ ಸಂಜಯ್ ಗಾಯಕ್ವಾಡ್, ಕೊಲಾಬಾದ ಶಾಸಕರ ಹಾಸ್ಟೆಲ್‌ನ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವ ವಿಡಿಯೋ ಬುಧವಾರ ವೈರಲ್ ಆಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಮಹಾನಗರ ಪಾಲಿಕೆ ಚುನಾವಣೆ ಮುಸ್ಲಿಂ ಪ್ರಾಬಲ್ಯವಿರುವ ಗೋದ್ರಾ ವಾರ್ಡ್ ನಲ್ಲಿ ಜಯಶಾಲಿಯಾದ ಹಿಂದೂ ಮಹಿಳೆ

ಅಹ್ಮದಾಬಾದ್: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ 2026ರಲ್ಲಿ ಅಚ್ಚರಿ ಫಲಿತಾಂಶವೊಂದು ಹೊರಬಿದ್ದಿದ್ದು, ಶೇ.100 ರಷ್ಟು ಮುಸ್ಲಿಂ...

ಮಂಗಳೂರು ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ...

ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿಗೆ 7 ಸಂಸದರು, ಮೇಲ್ಮನೆಯಲ್ಲಿ ಸರಳ ಬಹುಮತಕ್ಕೆ ಕೇವಲ 10 ಸ್ಥಾನಗಳ ಕೊರತೆ ಬಲ ಹೆಚ್ಚಿಸಿಕೊಂಡ ಎನ್ ಡಿ ಎ

ನವದೆಹಲಿ: ರಾಜ್ಯಸಭೆಯಲ್ಲಿ ಆಮ್ ಆದ್ಮಿ  ಪಕ್ಷದ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ,...

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...