ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಪವಿತ್ರ ಸಿಂಗ್ ಬಟಾಲ ಬಂಧನ

75

“ಪಾಕಿಸ್ತಾನದ ಐಎಸ್ ಐ ಜೊತೆಗೆ ಸಂಪರ್ಕ ಹೊಂದಿರುವ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಭಾರತದಿಂದ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಪವಿತ್ತರ್ ಸಿಂಗ್ ಬಟಾಲಾ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಎಫ್‌ಬಿಐ ಬಂಧಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ

. ಇತರ ಏಳು ಮಂದಿಯೊಂದಿಗೆ ಬಟಾಲಾ ಅವರನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ

.ಬಂಧಿತರಲ್ಲಿ ಬಟಾಲಾ ಜೊತೆಗೆ ದಿಲ್‌ಪ್ರೀತ್ ಸಿಂಗ್, ಅರ್ಶ್‌ಪ್ರೀತ್ ಸಿಂಗ್, ಅಮೃತ್‌ಪ್ ಸಿಂಗ್, ವಿಶಾಲ್, ಗುರ್ತಾಜ್ ಸಿಂಗ್, ಮನ್‌ಪ್ರೀತ್ ರಾಂಧವಾ ಮತ್ತು ಸರಬ್ಜಿತ್ ಸಿಂಗ್ ಸೇರಿದ್ದಾರೆ.

ಅಪಹರಣ, ಚಿತ್ರಹಿಂಸೆ, ಸುಳ್ಳು ಸೆರೆವಾಸ, ಅಪರಾಧದ ಸಂಚು, ಸಾಕ್ಷಿ ಬೆದರಿಕೆ, ಬಂದೂಕಿನಿಂದ ಹಲ್ಲೆ ಮತ್ತು ಭಯೋತ್ಪಾದನೆಗೆ ಬೆದರಿಕೆ ಸೇರಿದಂತೆ ಅನೇಕ ಅಪರಾಧ ಆರೋಪಗಳ ಮೇಲೆ ಅವರನ್ನು ಸ್ಯಾನ್ ಜೋಕ್ವಿನ್ ಕೌಂಟಿ ಜೈಲಿಗೆ ದಾಖಲಿಸಲಾಗಿದೆ.

ಶಂಕಿತ ಆರೋಪಿಗಳು ಹಾಗೂ ಐದು ಹ್ಯಾಂಡ್ ಗನ್, ಒಂದು ರೈಫಲ್ಸ್, ನೂರಾರು ಸುತ್ತಿನ ಮದ್ದುಗುಂಡುಗಳು, ಮ್ಯಾಗಜಿನ್ ಗಳು ಮತ್ತು $15,000 ಕ್ಕೂ ಹೆಚ್ಚು ನಗದನ್ನು ಒಳಗೊಂಡ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಬಟಾಲಾ ಅವರ ವಿರುದ್ಧ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು.

ಇತ್ತೀಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜೂನ್‌ನಲ್ಲಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಆತನ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ವರದಿ ಹೇಳಿದೆ.

BKI ಭಯೋತ್ಪಾದಕ ಲಖ್ಬೀರ್ ಲಾಂಡಾ ಮತ್ತು ಜತೀಂದರ್ ಜೋತಿ ಜೊತೆಗೆ ಪವಿತ್ತರ್ ಸಿಂಗ್ ಬಟಾಲ್ ಹೆಸರನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಪಂಜಾಬ್ ಮೂಲದ ದರೋಡೆಕೋರರು ಮತ್ತು ಬಟಾಲಾ ಗ್ಯಾಂಗ್ ಗೆ ಬಂದೂಕು ಪೂರೈಸಿದ ಆರೋಪ ಜೋತಿ ಮೇಲಿದೆ.

ಬಟಾಲಾನ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಭಾರತೀಯ ಏಜೆನ್ಸಿಗಳು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿವೆ ಎಂದು ಹೇಳಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಹೊರ್ಮುಜ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, ಇರಾನ್ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಭಾರತ

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇಗೆ ಸೇರಿದ ಎರಡು ತೈಲ ಸಾಗಣೆ ಹಡಗುಗಳ ಮೇಲೆ ಇರಾನ್ ನಡೆಸಿದ...

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...