ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

129

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ,

ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ,

ಸಂಚಾರ ವಿಭಾಗ ಅನೂಪ್ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್ಪಿ, ಬೆಂಗಳೂರು ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ ಎಂ.ನಾರಾಯಣ್ – ಎಲೆಕ್ಟ್ರಾನಿಕ್ ಸಿಟಿ ವಿಭಾಗ,

ಡಿಸಿಪಿ ಅನಿತಾ.ಬಿ ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ ಸೈದಲು ಅಡಾವತ್ – ಸಿಐಡಿ, ಎಸ್ಪಿ ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ ಶ್ರೀಹರಿ ಬಾಬು – ಬೆಂಗಳೂರುಸಿಸಿಬಿ ಡಿಸಿಪಿ

ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ ವರ್ತಿಕಾ ಕಟೀಯಾರ್ – ಬಳ್ಳಾರಿ ವಲಯ, ಡಿಐಜಿ ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ ಸಿರಿಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್ ಸಿಮಿ ಮರೀಯ ಜಾರ್ಜ್‌ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ

ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಕೆ ಎಸ್ ಆರ್ ಪಿ ಯಶೋಧ ವಟ್ಟಗೋಡಿ – ಎಸ್ಪಿ, ಹಾವೇರಿ ಗುಂಜನ್ ಅರ್ಯಾ – ಎಸ್ಪಿ, ಧಾರವಾಡ ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್ಎಸ್ಎಲ್ ಬೆಂಗಳೂರು ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ ರೋಹನ್ ಜಗದೀಶ್ – ಎಸ್ಪಿ, ಗದಗ ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್ ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ,

ಮಂಗಳೂರು ನಗರ ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ ಎಸ್.ಜಾನವಿ – ಎಸ್ಪಿ, ವಿಜಯನಗರ ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್ ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್ ವರ್ಗಾವಣೆಗೊಳಿಸಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...