ಇಬ್ಬರು ಕೊಲೆ ಯತ್ನ ಆರೋಪಿಗಳ ಮೇಲೆ ಪೊಲೀಸ್ ರಿಂದ ಗುಂಡಿನ ದಾಳಿ ಆರೋಪಿಗಳ ಬಂಧನ

48

ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದೆ.


ನಗರದ ಎಸ್.ಎಸ್ ರಸ್ತೆಯ ಅಮರ ವರ್ಷಿಣಿ ಸೌಹಾರ್ದ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಸೋಮವಾರ ರೌಡಿ ಶೀಟರ್ ಸುಶೀಲ್ ಕುಮಾರ ಕಾಳೆ ಎಂಬಾತನ ಮೇಲೆ ನಾಲ್ಕೈದು ದುಷ್ಕರ್ಮಿಗಳು ಚಾಕು, ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದರು.

ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ನಾಡ ಪಿಸ್ತೂಲ್ ನಿಂದ ಗುಂಡು ಹಾರಿಸಿ, ಬೈಕಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು,ಈ ವೇಳೆ ಆರೋಪಿಗಳ ಕಾಲಿಗೆ ಗುಂಡು ತಗುಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಆರೋಪಿ ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಇನ್ನುಳಿದ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...