ಸೌಜನ್ಯ ಅತ್ಯಾಚಾರ ಪ್ರಕರಣ ನ್ಯಾಯಕ್ಕಾಗಿ ಬೆಂಗಳೂರಿನಿಂದ ಪಾದಯಾತ್ರೆ ಮಾಡಿದ ಕಬ್ಜಾ ಶರಣ್ ತಂಡವನ್ನು ಧರ್ಮಸ್ಥಳ ಮುಖ್ಯದಾರದಲ್ಲಿ ತಡೆದ ಸ್ಥಳೀಯರ ನಡುವೆ ಮಾತಿನ ಚಕಮಕಿ

36

“ಬೆಂಗಳೂರಿನ ಆರ್ ಸಿ ಬಿ ಪಂದ್ಯದ ವೇಳೆ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವುದಾಗಿ ಸವಾಲು ಹಾಕಿ ವಿಡಿಯೋ ಮಾಡಿ ಪೊಲೀಸರಿಂದ ಎಚ್ಚರಿಕೆ ಪಡೆದಿದ್ದ ಕಬ್ಜಾ ಶರಣ್ ಇದೀಗ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದು ಈ ತಂಡವನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತರು ಧರ್ಮಸ್ಥಳದ ಮುಖ್ಯ ದ್ವಾರದಲ್ಲಿ ತಡೆಹಿಡಿದರು.

ಈ ಸಂದರ್ಭದಲ್ಲಿ ಪಾದಯಾತ್ರಿಗಳು ಮತ್ತು ಗ್ರಾಮಸ್ಥರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ‘

ಸೌಜನ್ಯಳಿಗೆ ನ್ಯಾಯ’ ಎಂಬ ಧ್ಯೆಯದೊಂದಿಗೆ ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ರುದ್ರವಾಡಿ ಗ್ರಾಮದ ಶರಣಪ್ಪ ನೇತೃತ್ವದ ತಂಡವು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಪಾದಯಾತ್ರೆ ಮುಗಿಸಿ ತಂಡವು ಧರ್ಮಸ್ಥಳ ಕ್ಷೇತ್ರದ ದ್ವಾರದ ಬಳಿ ಪ್ರವೇಶಿಸಲು ಮುಂದಾದಾಗ, ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯರು ಮತ್ತು ಭಕ್ತರು ಅವರನ್ನು ತಡೆದರು.

ಪಾದಯಾತ್ರೆಯ ಸಂದರ್ಭದಲ್ಲಿ ಶರಣಪ್ಪ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ‘ನಕಲಿ ದೇವಮಾನವ’ ಎಂಬ ಪದ ಬಳಸಿ ನಿಂದಿಸಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಧರ್ಮಸ್ಥಳ ಪೊಲೀಸರು ನೆರೆದ ಗುಂಪನ್ನು ಚದುರಿಸಿದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...