thekarnatakatoday.com
National

ಉಪರಾಷ್ಟ್ರಪತಿ ಜಗದೀಪ್ ಧನಕರ್ ನೀಡಿದ ರಾಜೀನಾಮೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ ಕೇಂದ್ರ ಸರಕಾರ

“ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಶೂನ್ಯ ವೇಳೆ ಬಳಿಕ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭಾ ಕಲಾಪ ಮತ್ತೆ ಆರಂಭವಾದಾಗ ಅಧ್ಯಕ್ಷೀಯ ಪೀಠದಲ್ಲಿದ್ದ ಘನಶ್ಯಾಮ ತಿವಾರಿಯವರು ಗೃಹ ಸಚಿವಾಲಯದ ಅಧಿಸೂಚನೆ ಬಗ್ಗೆ ಸಭೆಗೆ ತಿಳಿಸಿದರು.

‘2025 ಜುಲೈ 22ರ ಅಧಿಸೂಚನೆಯಲ್ಲಿ ಗೃಹ ಸಚಿವಾಲಯವು, ಸಂವಿಧಾನದ 67 (ಎ) ವಿಧಿಯ ಅಡಿಯಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ನೀಡಿದ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬಂದಿದೆ ಎಂದು ತಿಳಿಸಿದೆ‘ ಎಂದು ತಿವಾರಿ ಘೋಷಿಸಿದರು.

ಜಗದೀಪ್ ಧನಕರ್ ಅವರ ರಾಜೀನಾಮೆಯ ನಂತರ ಮಂಗಳವಾರದ ಕಲಾಪಗಳನ್ನು ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆಂದು ಎಂದು ಪತ್ರದಲ್ಲಿ ತಿಳಿಸಿದ್ದರು

ನಾನು ನನ್ನ ಆರೋಗ್ಯ ರಕ್ಷಣೆಯತ್ತ ಗಮನ ಹರಿಸಲು ಬಯಸುತ್ತೇನೆ. ಈ ನಿಟ್ಟಿನಲ್ಲಿ, ವೈದ್ಯರ ಸಲಹೆಯ ಮೇರೆಗೆ ನಾನು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನದ 67(ಎ) ವಿಧಿಯ ಪ್ರಕಾರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ನನ್ನ ನಿರ್ಧಾರ ತಕ್ಷಣವೇ ಜಾರಿಗೆ ಬರಲಿದೆ.

ಉಪರಾಷ್ಟ್ರಪತಿ ಹುದ್ದೆಯ ಜವಾಬ್ದಾರಿಗಳನ್ನು ಪೂರೈಸುವ ಅವಧಿಯಲ್ಲಿ ಸಂಪೂರ್ಣ ಬೆಂಬಲ ನೀಡಿದ್ದಕ್ಕಾಗಿ ಅಧ್ಯಕ್ಷ ಮುರ್ಮು, ಪ್ರಧಾನಿ ಮೋದಿ, ಕೇಂದ್ರ ಸಚಿವರು ಮತ್ತು ಎಲ್ಲಾ ಸಂಸತ್ ಸದಸ್ಯರಿಗೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮೆಲ್ಲರಿಂದ ನನಗೆ ದೊರೆತ ಅಮೂಲ್ಯ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ.

ನಾನು ಉಪರಾಷ್ಟ್ರಪತಿಯಾಗಿದ್ದ ವರ್ಷಗಳಲ್ಲಿ ಅನೇಕ ಅಮೂಲ್ಯ ವಿಷಯಗಳನ್ನು ಕಲಿತಿದ್ದೇನೆ. ನಾನು ಅನೇಕ ಜೀವನ ಅನುಭವಗಳನ್ನು ಗಳಿಸಿದ್ದೇನೆ. ಉಪರಾಷ್ಟ್ರಪತಿಯಾಗಿ, ಇಂತಹ ಪರಿವರ್ತನಾ ಸಮಯದಲ್ಲಿ ದೇಶದ ಆರ್ಥಿಕ ಪ್ರಗತಿ ಮತ್ತು ಅಭಿವೃದ್ಧಿಯನ್ನು ಗಮನಿಸಿದ್ದೇನೆ.

ಈ ಅವಕಾಶವನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ. ಇದು ನನಗೆ ಹೆಚ್ಚಿನ ತೃಪ್ತಿಯನ್ನು ನೀಡುತ್ತದೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ರಾಜೀನಾಮೆಯೊಂದಿಗೆ ಅಧಿಕಾರದಲ್ಲಿರುವಾಗ ರಾಜೀನಾಮೆ ನೀಡಿದ ಮೂರನೇ ಉಪರಾಷ್ಟ್ರಪತಿಯಾಗಿ ಧನಕರ್ ದಾಖಲೆ ಪುಸ್ತಕಗಳಲ್ಲಿ ದಾಖಲಾಗಿದ್ದಾರೆ.

ಈ ಹಿಂದೆ, ವಿವಿ ಗಿರಿ ಮತ್ತು ಆರ್. ವೆಂಕಟರಾಮನ್ ಇದೇ ರೀತಿಯ ರಾಜೀನಾಮೆಗಳನ್ನು ಸಲ್ಲಿಸಿದ್ದರು. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಬ್ಬರೂ ರಾಜೀನಾಮೆ ನೀಡಿದ್ದರು. ಆದರೆ, ಅನಾರೋಗ್ಯದ ಕಾರಣ ಧನಕರ್ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


Related posts

ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ

The Karnataka Today

ಜಮ್ಮು-ಕಾಶ್ಮೀರ ಉಗ್ರರ ದಾಳಿ ಪ್ರಕರಣ ಇಬ್ಬರು ಸ್ಥಳೀಯ ಉಗ್ರರು ಭಾಗಿ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ 

The Karnataka Today

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರಕಾರ

The Karnataka Today

Leave a Comment