ಮೊಟ್ಟೆ ನೀಡುವ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದು ದೀರ್ಘಕಾಲದಿಂದ ಅನುಸರಿಸಿಕೊಂಡು ಬಂದಿರುವ ಧಾರ್ಮಿಕ ನಿಯಮಗಳ ಉಲ್ಲಂಘನೆ ಎಂದು ಹೇಳಿದ್ದಾರೆ.
ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಶಾಲೆ ಇದ್ದು, ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ಬೇಯಿಸುವುದು ಅವರ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ಗ್ರಾಮಸ್ಥರು ವಾದಿಸಿದ್ದಾರೆ.
ದೇವಾಲಯದ ಆವರಣದ ಬಳಿ ಮಾಂಸ ಅಥವಾ ಮೊಟ್ಟೆಗಳನ್ನು ನಿಷೇಧಿಸಲಾಗಿದೆ. ಶಾಲೆಯ 120 ವಿದ್ಯಾರ್ಥಿಗಳ ಪೈಕಿ 80 ವಿದ್ಯಾರ್ಥಿಗಳು ಈಗ ಮೊಟ್ಟೆಗಳನ್ನು ಪಡೆಯುತ್ತಿಲ್ಲ.
ಶಾಲೆ ಆವರಣದಲ್ಲಿ ಮೊಟ್ಟೆಗಳನ್ನು ಬೇಯಿಸುವುದನ್ನು ಮುಂದುವರಿಸಿದರೆ, ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸುವುದಾಗಿ ಪೋಷಕರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಹಲವು ಮಂದಿ ವರ್ಗಾವಣೆ ಪ್ರಮಾಣಪತ್ರಗಳನ್ನು (TCs) ಕೋರಿದ್ದಾರೆ.
ನಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ಶಾಲೆ ಆವರಣದಲ್ಲಿ ಮೊಟ್ಟೆಗಳನ್ನು ಬೇಯಿಸುತ್ತಿರುವ ಕಾರಣ ನಾವು ನಮ್ಮ ಮಕ್ಕಳಿಗೆ ಟಿಸಿ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಪೋಷಕರೊಬ್ಬರು ಹೇಳಿದರು. ಸರ್ಕಾರದ ನೀತಿಯನ್ನು ಸರ್ಕಾರ ಶಾಲೆ ಅನುಸರಿಸುತ್ತಿದ್ದು, ಪೋಷಕರು ತಮ್ಮ ಬೇಡಿಕೆಯನ್ನು ಪುನರ್ ಪರಿಶೀಲಿಸಬೇಕು ಎಂದು ಶಾಲೆಯ ಪ್ರಾಂಶುಪಾಲರು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ, ಶಿಕ್ಷಣ ಇಲಾಖೆ, ಶಾಲಾ ಮುಖ್ಯಸ್ಥರು, ಪೋಷಕರೊಂದಿಗೆ ಸಭೆ ಕರೆದಿದ್ದು, ಈ ಬಗ್ಗೆ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದರು.
ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆಗೆ ವಿರೋಧ; ಶಾಲೆ ತೊರೆಯಲುಮುಂದಾದ 80 ವಿದ್ಯಾರ್ಥಿಗಳು
ಮಂಡ್ಯ: ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಮೊಟ್ಟೆ ಬೇಯಿಸುತ್ತಿರುವುದರಿಂದ ಶಾಲೆ ತೊರೆಯವುದಾಗಿ 80 ವಿದ್ಯಾರ್ಥಿಗಳು ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆ ಗ್ರಾಮದಲ್ಲಿ ನಡೆದಿದೆ.