thekarnatakatoday.com
News

ವಿಶ್ವ ವಿಖ್ಯಾತಮೈಸೂರು ದಸರಾ 6ನೇ ಬಾರಿಗೆ ತಾಯಿ ಚಾಮುಂಡೇಶ್ವರಿ ವಿಗ್ರಹದೊಂದಿಗೆ ಚಿನ್ನದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು

“ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ.

ಸತತ 6ನೇ ಬಾರಿಗೆ ಅಭಿಮನ್ಯು ಆನೆಯು ತಾಯಿ ಚಾಮುಂಡೇಶ್ವರಿ ವಿಗ್ರಹ ಇರುವ ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು, ಸತತ 5 ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು ಆನೆ ಈಗ 6ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ

. ಈ ಬಾರಿ ಅಭಿಮನ್ಯು ಆನೆಯೊಂದಿಗೆ ಒಟ್ಟು 14 ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಈ ಬಾರಿಯ ದಸರಾ ಮಹೋತ್ಸವಕ್ಕೆ 14 ಆನೆಗಳು ಆಯ್ಕೆಯಾಗಿದ್ದು, ಈ ಪೈಕಿ ಮೊದಲ ತಂಡದಲ್ಲಿ ಆಗಮಿಸಲಿರುವ 9 ಆನೆಗಳ ಪಟ್ಟಿಯನ್ನು ಅರಣ್ಯ ಇಲಾಖೆ ಗುರುವಾರ ಬಿಡುಗಡೆ ಗೊಳಿಸಿದೆ.

ಮೊದಲ ತಂಡದಲ್ಲಿ 7 ಗಂಡಾನೆ ಹಾಗೂ 2 ಹೆಣ್ಣಾನೆಗಳಿವೆ. ಮತ್ತಿಗೋಡು ಶಿಬಿರದಲ್ಲಿರುವ ಅಭಿಮನ್ಯು (59 ವರ್ಷ), ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್‌ (24), ಧನಂಜಯ (44), ಪ್ರಶಾಂತ್‌ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40), ದುಬಾರೆ ಶಿಬಿರದ ಕಾವೇರಿ (45/ಹೆಣ್ಣಾನೆ), ಬಳ್ಳೆಯ ಲಕ್ಷ್ಮೀ (53/ಹೆಣ್ಣಾನೆ) ಆನೆಗಳು ಮೈಸೂರಿಗೆ ಆಗಮಿಸಲಿವೆ.

ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು ಈವರೆಗೆ 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತಿ ಪಡೆದಿದೆ.

ಅಭಿಮನ್ಯು ಒಂಬತ್ತು ಅಡಿ ಎತ್ತರ ಮತ್ತು 4,920 ಕೆಜಿ ತೂಕವನ್ನು ಹೊಂದಿದ್ದಾನೆ, ತಲಾ 2.75 ಮೀಟರ್ ಗಾತ್ರದ ದಂತಗಳನ್ನು ಹೊಂದಿದ್ದಾನೆ.

ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ನಡೆಯುವ ಗಜಪಯಣದಲ್ಲಿ ವಿಧ್ಯುಕ್ತ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೊದಲ ಹತದಲ್ಲಿ ಅಂಬಾನೆ ಆನೆ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಆ.4 ರದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜಪಯಣ ಆರಂಭಿಸಲಿವೆ.

ಗಜಪಯಣಕ್ಕೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚಾಲನೆ ದೊರೆಯಲಿದ್ದು, ನಂತರ ಆನೆಗಳನ್ನು ಮೈಸೂರಿಗೆ ಲಾರಿಗಳ ಮೂಲಕ ಕರೆತರಲಾಗುತ್ತದೆ ಎಂದು ತಿಳಿಸಿದ್ದಾರೆ.

Related posts

ಮಾವು ಬೆಳೆಗಾರರ ಪ್ರತಿಭಟನೆಗೆ ಬೆದರಿದ ಸರಕಾರ ನಂದಿ ಬೆಟ್ಟದಲ್ಲಿ ನಡೆಯಬೇಕಾಗಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್

The Karnataka Today

ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು

The Karnataka Today

ದೆಹಲಿ ವಿಧಾನಸಭಾ ಅಧಿವೇಶನ ಗದ್ದಲವೇಬ್ಬಿಸಿದ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಸಹಿತ 10 ಶಾಸಕರ ಅಮಾನತು

The Karnataka Today

Leave a Comment