“ಸಾಂಸ್ಕೃತಿಕ. ನಗರಿ ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ ಪತ್ತೆಯಾಗಿದ್ದು ಕೋಟ್ಯಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು, ಹೊರವಲಯದ ರಿಂಗ್ ರಸ್ತೆ ಬಳಿ ಇರುವ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಕೆಗೆ ಬಳಕೆ ಮಾಡಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಮೈಸೂರಿನಲ್ಲಿ ಪತ್ತೆಯಾದ ಮಾದಕ ವಸ್ತುವಿಗೆ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ .ಮೈಸೂರಿನಿಂದ ಡ್ರಗ್ ಸಪ್ಲೈ ಆಗುತ್ತಿರುವ ಬಗ್ಗೆ ಪೆಡ್ಲರ್ ಬಾಯ್ಬಿಟ್ಟಿದ್ದಾನೆ.
ಹೀಗಾಗಿ ಮಹಾರಾಷ್ಟ್ರ ಪೊಲೀಸರು ಇಂದು ಮೈಸೂರು ಪೊಲೀಸರ ಸಹಯೋಗದಲ್ಲಿ ದಾಳಿ ನಡೆಸಿದ್ದಾರೆ. ಮೈಸೂರಿನಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿರುವುದು ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಬಂಧಿತ ಡ್ರಗ್ ಪೆಡ್ಲರ್ ಒಬ್ಬ ತಮಗೆ ಮೈಸೂರಿನಿಂದ ಎಂಡಿಎಂಎ ಸರಬರಾಜು ಆಗುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ. ಅದನ್ನು ಆಧರಿಸಿ ಮೈಸೂರಿಗೆ ಆಗಮಿಸಿದ ಮಹಾರಾಷ್ಟ್ರ ಪೊಲೀಸರು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿದಾಗ ಡ್ರಗ್ಸ್ ತಯಾರಿಕಾ ಅಡ್ಡೆ ಪತ್ತೆಯಾಗಿದೆ.
Leave a comment